ಅಕ್ರಮ ಮದ್ಯ ಸಂಗ್ರಹಿಸಿಟ್ಟಿದ್ದ ಮನೆಗೆ ದಾಳಿ: 4 ಲಕ್ಷ ರೂ. ಮೌಲ್ಯದ ವಸ್ತು ಜಪ್ತಿ

Update: 2019-03-22 17:35 GMT

ವಿಜಯಪುರ,ಮಾ.22: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಅಕ್ರಮವಾಗಿ ಮದ್ಯ ಸಂಗ್ರಹಿಸಿಟ್ಟಿದ್ದ ಮನೆಗೆ ದಾಳಿ ಮಾಡಿದ ಅಬಕಾರಿ ಪೊಲೀಸರು 4 ಲಕ್ಷ ರೂ. ಮೌಲ್ಯದ ಮದ್ಯ ವಶಪಡಿಸಿಕೊಂಡಿದ್ದಾರೆ.

ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡ್ ಗ್ರಾಮದ ಮನೆಯೊಂದರಲ್ಲಿ ಸಂಗ್ರಹಿಸಿಟ್ಟಿದ್ದ ಮದ್ಯವನ್ನು ಪೊಲೀಸರು ಜಪ್ತಿ ಮಾಡಿದ್ದು, ಮನೆ ಯಜಮಾನ ನಾಗಪ್ಪ ವಡ್ಡರ ಎಂಬವರನ್ನು ವಶಕ್ಕೆ ಪಡೆದಿದ್ದಾರೆ.

ವಿಜಯಪುರ ಅಬಕಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News