ನ್ಯಾಯಮೂರ್ತಿ ಪಿ.ಸಿ. ಘೋಷ್ ಭಾರತದ ಮೊದಲ ಲೋಕಪಾಲ್ ಆಗಿ ಪ್ರಮಾಣ

Update: 2019-03-23 06:26 GMT

ಹೊಸದಿಲ್ಲಿ, ಮಾ.23: ಭಾರತದ ಮೊದಲ ಲೋಕ ಪಾಲ್ ಆಗಿ ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ಪಿನಾಕಿ ಚಂದ್ರ ಘೋಷ್ ಶನಿವಾರ ಪ್ರಮಾಣ ವಚನ ಸ್ವೀಕರಿಸಿ, ಅಧಿಕಾರ ವಹಿಸಿಕೊಂಡರು.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಮಾಣ ವಚನ ಬೋಧಿಸಿದರು.  66ರ ಹರೆಯದ ಪಿ.ಸಿ.ಘೋಷ್ 2017 ಮೇನಲ್ಲಿ  ಸುಪ್ರೀಂ ಕೋರ್ಟ್ ನ ನ್ಯಾಯಾಧೀಶ ಹುದ್ದೆಯಿಂದ ನಿವೃತ್ತರಾಗಿದ್ದರು.  ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ 2017 ಜೂನ್ 29ರಿಂದ  ಅವರು ಸೇವೆ ಸಲ್ಲಿಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News