ಮಂಡ್ಯದಲ್ಲಿ ಸುಮಲತಾಗೆ ಬೆಂಬಲ ಘೋಷಿಸಿದ ಬಿಜೆಪಿ

Update: 2019-03-23 15:13 GMT

ಬೆಂಗಳೂರು, ಮಾ.23: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಹಿರಿಯ ನಟಿ ಸುಮಲತಾ ಅಂಬರೀಷ್‌ಗೆ ಬಿಜೆಪಿ ಬೆಂಬಲ ಘೋಷಿಸಿದೆ.

ಶನಿವಾರ ಹೊಸದಿಲ್ಲಿಯಲ್ಲಿ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಜೆ.ಪಿ.ನಡ್ಡಾ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‌ರನ್ನು ಬೆಂಬಲಿಸಲು ನಿರ್ಧರಿಸಲಾಗಿದೆ ಎಂದರು.

ಕೋಲಾರ ಲೋಕಸಭಾ ಕ್ಷೇತ್ರದಿಂದ ಬಿಬಿಎಂಪಿ ಸದಸ್ಯ ಎಸ್.ಮುನಿಸ್ವಾಮಿಗೆ ಬಿಜೆಪಿ ಟಿಕೆಟ್ ನೀಡಿದೆ. ಇನ್ನುಳಿದಂತೆ ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಕೊಪ್ಪಳ, ರಾಯಚೂರು ಹಾಗೂ ಚಿಕ್ಕೋಡಿ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಘೋಷಿಸಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News