ಯಡಿಯೂರಪ್ಪ ಡೈರಿ ನಕಲಿ ಎಂದ ಐಟಿ ಇಲಾಖೆ

Update: 2019-03-23 16:58 GMT

ಬೆಂಗಳೂರು, ಮಾ. 23: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕೇಂದ್ರದ ನಾಯಕರಿಗೆ 1,800 ಕೋಟಿ ರೂ.‘ಕಪ್ಪ’ ನೀಡಿದ್ದಾರೆನ್ನಲಾದ ಸಂಬಂಧ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ್ದ ಡೈರಿ ನಕಲಿ ಎಂದು ಆದಾಯ ತೆರಿಗೆ ಇಲಾಖೆ (ಐಟಿ) ಸ್ಪಷ್ಟನೆ ನೀಡಿದೆ.

ಶನಿವಾರ ಐಟಿ ಇಲಾಖೆಯಲ್ಲಿ ಸುದ್ಧಿಗೋಷ್ಠಿ ನಡೆಸಿದ ಕರ್ನಾಟಕ ಮತ್ತು ಗೋವಾ ವಿಭಾಗದ ಮಹಾ ನಿರ್ದೇಶಕ ಬಿ.ಆರ್.ಬಾಲಕೃಷ್ಣನ್, ನಿನ್ನೆ ದಿಲ್ಲಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರೊಬ್ಬರು ಬಿಡುಗಡೆ ಮಾಡಿರುವ ದಾಖಲೆಗಳೆಲ್ಲ ನಕಲಿ. ಐಟಿ ದಾಳಿಯಲ್ಲಿ ನಮ್ಮ ಸಿಬ್ಬಂದಿಗೆ ಕೆಲ ದಾಖಲೆಗಳು ಸಿಕ್ಕಾಗ, ಅವನ್ನೆಲ್ಲ ವಶಕ್ಕೆ ಪಡೆದುಕೊಳ್ಳಲಾಗಿತ್ತು.

ಆ ದಾಖಲೆಗಳ ಜೈರಾಕ್ಸ್ ಪ್ರತಿಗಳಲ್ಲಿ ಹೈದರಾಬಾದ್ ಸಿಎಫ್‌ಎಸ್‌ಎಲ್ ಗೆ ಸತ್ಯಾಂಶ ಕಂಡು ಬಂದಿಲ್ಲ. ಹೀಗಾಗಿ ನಮ್ಮ ಅಭಿಪ್ರಾಯದ ಪ್ರಕಾರ ಅದೊಂದು ಸುಳ್ಳು ದಾಖಲೆ ಅಷ್ಟೇ. ನಿನ್ನೆ ಬಿಡುಗಡೆ ಮಾಡಿದ್ದ ಮೊದಲ ಪುಟ ನಮಗೆ ಸಿಕ್ಕಿರಲಿಲ್ಲ. ಹೀಗಾಗಿ ಹಣ ವರ್ಗಾವಣೆಯ ಬಗ್ಗೆ ಬರೆದಿರುವ ಆ ಪುಟಗಳು ಸುಳ್ಳು ಎಂದು ಅವರು ತಿಳಿಸಿದರು.

ಸಚಿವ ಡಿ.ಕೆ.ಶಿವಕುಮಾರ್ ಅವರ ಮೇಲೆ ದಾಳಿ ವೇಳೆ ಕೆಲ ದಾಖಲಾತಿಗಳು ಲಭ್ಯವಾಗಿದ್ದವು. ಆ ದಾಖಲೆಗಳನ್ನ ತೋರಿಸಿ ಡಿ.ಕೆ.ಶಿವಕುಮಾರ್ ತನಿಖೆಯಿಂದ ರಿಯಾಯಿತಿ ಪಡೆದುಕೊಳ್ಳಲು ಮುಂದಾಗಿದ್ದರು. ನಾವು ಯಾವುದೇ ಒಂದು ಪಕ್ಷದ ಪರವಾಗಿ ಕೆಲಸ ಮಾಡದ ಹಿನ್ನೆಲೆಯಲ್ಲಿ ನಮ್ಮ ಸಿಬ್ಬಂದಿ ಸಹಾಯ ಮಾಡಲಿಲ್ಲ ಎಂದು ಅವರು ಸ್ಪಷ್ಟನೆ ನೀಡಿದರು.

ಇದೇ ಸಂದರ್ಭದಲ್ಲಿ ಲಭ್ಯವಾಗಿರುವ ಕೆಲ ದಾಖಲೆಗಳ ಲಾಭ ಪಡೆಯಲು ಸಚಿವ ಡಿ.ಕೆ.ಶಿವಕುಮಾರ್ ಮುಂದಾಗಿದ್ದರು. ಆದರೆ, ಕಾನೂನು ಪ್ರಕಾರವಾಗಿ ನಾವು ಯಾವ ಕ್ರಮ ಕೈಗೊಳ್ಳಬೇಕು ಆ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಬಾಲಕೃಷ್ಣನ್ ಇದೇ ವೇಳೆ ಸ್ಪಷ್ಟಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News