ಜಮೀನು ಸರ್ವೆ ವಿಚಾರದಲ್ಲಿ ಮಾತಿನ ಚಕಮಕಿ: ಓರ್ವ ಪೊಲೀಸ್ ವಶಕ್ಕೆ

Update: 2019-03-23 17:21 GMT

ಬಂಟ್ವಾಳ, ಮಾ. 23: ಜಮೀನು ಸರ್ವೆ ಕಾರ್ಯ ವಿಚಾರದಲ್ಲಿ ಪೊಲೀಸ್ ಹಾಗೂ ಗುಂಪಿನ ನಡುವೆ ಮಾತಿನ ಚಕಮಕಿ ನಡೆದು ಪೊಲೀಸರು ಲಾಠಿಚಾರ್ಜ್ ನಡೆಸಿ, ಓರ್ವನನ್ನು ವಶಕ್ಕೆ ಪಡೆದಿರುವ ಘಟನೆ ನರಿಕೊಂಬು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ಶುಕ್ರವಾರ ನಡೆದಿದೆ.

ಅಕ್ಕರಂಗಡಿ ಜುಮಾ ಮಸೀದಿಗೆ ಸಂಬಂಧಪಟ್ಟ ಜಮೀನನ್ನು ಅನೆಕ್ಷರ್ ಜಿ. ಪ್ರಕಾರ ಸರ್ವೆ ಕಾರ್ಯ ಮಾಡುವ ವೇಳೆ ಗುಂಪು ಹಾಗೂ ಎಸ್ಸೈಗಳಿಬ್ಬರ ಮೇಲೆ ಮಾತಿನ ಚಕಮಕಿ ನಡೆದಿದೆ. ಬಳಿಕ ಗುಂಪಿನ ಮೇಲೆ ಲಾಠಿ ಚಾರ್ಜ್ ನಡೆಸಿದ ಪೊಲೀಸರು ಓರ್ವನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೆ ಗುರಿಪಡಿಸಿದ್ದಾರೆಂದು ತಿಳಿದುಬಂದಿದೆ.

ಕೆಲ ಹೊತ್ತು ಇಲ್ಲಿ ಗೊಂದಲದ ಪರಿಸ್ಥಿತಿ ಕೂಡಾ ನಿರ್ಮಾಣವಾಗಿತ್ತು. ಜಮೀನಿನ ಅಳತೆಯ ವೇಳೆ ಕಾನೂನು ಸುವ್ಯವಸ್ಥೆಗೆ ಭಂಗ ಬರುವ ಸಾಧ್ಯತೆಗಳಿವೆ ಎಂಬ ಕಾರಣಕ್ಕಾಗಿ ಹೆಚ್ಚುವರಿ ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದರು.

ಅಳತೆಯ ವೇಳೆ ಬಂಟ್ವಾಳ ಎಎಸ್ಪಿ ಸೈದುಲು ಅಡಾವತ್, ಬಂಟ್ವಾಳ ವೃತ್ತ ನಿರೀಕ್ಷಕ ಶರಣ್ ಗೌಡ ಹಾಗೂ ನಗರ ಠಾಣಾ ಎಸ್ಸೈ ಚಂದ್ರಶೇಖರ್, ಗ್ರಾಮಾಂತರ ಎಸ್ಸೈ ಪ್ರಸನ್ನ, ಟ್ರಾಫಿಕ್ ಎಸ್ಸೈ ಮಂಜುನಾಥ ಅವರು ಸ್ಥಳದಲ್ಲಿದ್ದು ಹೆಚ್ಚಿನ ಕ್ರಮ ಕೈಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News