ರಾಜ್ಯದಲ್ಲಿ 22 ಸ್ಥಾನಗಳಲ್ಲಿ ಗೆಲುವು ಖಚಿತ: ಬಿಎಸ್‌ವೈ

Update: 2019-03-23 17:26 GMT

ಬೆಂಗಳೂರು, ಮಾ.23: ಲೋಕಸಭಾ ಚುನಾವಣೆಯಲ್ಲಿ ನಾವು ನಿರೀಕ್ಷಿತ ಗುರಿಯಂತೆ ಕನಿಷ್ಠ 22 ಸ್ಥಾನಗಳಲ್ಲಿ ಗೆಲುವು ಸಾಧಿಸುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಶನಿವಾರ ಡಾಲರ್ಸ್‌ ಕಾಲನಿಯಲ್ಲಿರುವ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಕೆಲವೆಡೆ ಸಣ್ಣಪುಟ್ಟ ಅಸಮಾಧಾನ ಇರುವುದು ಸಹಜ. ಯಾರು ಅಸಮಾಧಾನಗೊಂಡಿದ್ದಾರೋ ಅವರನ್ನು ಕರೆದು ಮಾತನಾಡುತ್ತೇನೆ ಎಂದರು.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ಗೊಂದಲದ ಬಗ್ಗೆ ಈಗಲೇ ಏನನ್ನೂ ಹೇಳುವುದಿಲ್ಲ. ನಾವು ಸಂಭಾವಿತ ಅಭ್ಯರ್ಥಿಗಳ ಹೆಸರನ್ನು ಕೇಂದ್ರ ಸಮಿತಿಗೆ ಶಿಫಾರಸ್ಸು ಮಾಡಿದ್ದೇವೆ. ಈಗಾಗಲೇ 21 ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ. ಇನ್ನುಳಿದ ಏಳು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯೂ ಸಂಜೆ ವೇಳೆಗೆ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಯಡಿಯೂರಪ್ಪ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News