ಜನಾರ್ದನ ಪೂಜಾರಿಯನ್ನು ಭೇಟಿಯಾದ ನಳಿನ್ ಕುಮಾರ್ ಕಟೀಲು

Update: 2019-03-24 08:28 GMT

ಮಂಗಳೂರು, ಮಾ.24: ಹಾಲಿ ಸಂಸದ, ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಇಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ನಳಿನ್ ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಜನಾರ್ದನ ಪೂಜಾರಿಯವರನ್ನು ಭೇಟಿಯಾದರು.

ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್, ಪಕ್ಷದ ಮುಖಂಡರಾದ ಹರಿಕೃಷ್ಣ ಬಂಟ್ವಾಳ್, ಮಾಜಿ ಶಾಸಕ ಯೋಗೀಶ್ ಭಟ್, ಕಾರ್ಯಕರ್ತರು ಉಪಸ್ಥಿತರಿದ್ದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News