ಭೋಪಾಲದಲ್ಲಿ ‘ದಿಗ್ವಿಜಯ’ಕ್ಕಾಗಿ ಕಾಂಗ್ರೆಸ್: ಬಿಜೆಪಿ ಪ್ರತಿತಂತ್ರ
Update: 2019-03-24 16:34 IST
ಭೋಪಾಲ್, ಮಾ. 24: ಲೋಕಸಭಾ ಚುನಾವಣೆಯಲ್ಲಿ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್‌ರನ್ನು ಕಣಕ್ಕಿಳಿಸಿ ಬಿಜೆಪಿಯ ಶಕ್ತಿಕೇಂದ್ರವಾದ ಭೋಪಾಲ್‌ನ್ನು ತೆಕ್ಕೆಗೆಳೆದುಕೊಳ್ಳುವ ಕಾಂಗ್ರೆಸ್‌ನ ತಂತ್ರಕ್ಕೆ ಬಿಜೆಪಿಯು ಪ್ರತಿತಂತ್ರ ರೂಪಿಸುತ್ತಿದೆ.
ದಿಗ್ವಿಜಯ್ ಸಿಂಗ್ ವಿರುದ್ಧ ಪ್ರಮುಖ ನಾಯಕನನ್ನೇ ಕಣಕ್ಕಿಳಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಬಿಜೆಪಿಯ ಅಭ್ಯರ್ಥಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಳೆದ ವರ್ಷ ನಡೆದ ಚುನಾವಣೆಯಲ್ಲಿ ಬಿಜೆಪಿಯ ಶಿವರಾಜ್ ಸಿಂಗ್ ಚೌಹಾಣ್ ಸರಕಾರವನ್ನು ಹೊರಹಾಕಿ ಮಧ್ಯಪ್ರದೇಶದಲ್ಲಿ ಕಮಲ್‌ನಾಥ್ ನೇತೃತ್ವದಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆಯೇರಿತ್ತು.