ಚಿದಂಬರಂ ಪುತ್ರ ಕಾರ್ತಿಗೆ ಶಿವಗಂಗಾದಿಂದ ಕಾಂಗ್ರೆಸ್ ಟಿಕೆಟ್
Update: 2019-03-24 18:27 IST
ಹೊಸದಿಲ್ಲಿ, ಮಾ.25: ಕಾಂಗ್ರೆಸ್ ರವಿವಾರ ಲೋಕಸಭೆಯ 10 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದ್ದು, ಭ್ರಷ್ಟಾಚಾರದ ಆರೋಪ ಹೊತ್ತಿರುವ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರು ತಮಿಳುನಾಡಿನ ಶಿವಗಂಗಾ ಕ್ಷೇತ್ರದಿಂದ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ.
ಕಾರ್ತಿ ಚಿದಂಬರಂ ಐಎನ್ ಎಕ್ಸ್ ಮೀಡಿಯಾ ಹಣ ಅವ್ಯವಹಾರ ಹಗರಣದಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ.
ಮಹಾರಾಷ್ಟ್ರದ ನಾಲ್ಕು, ಬಿಹಾರ ಮೂರು , ತಮಿಳುನಾಡು, ಕರ್ನಾಟಕ ಹಾಗೂ ಜಮ್ಮು ಮತ್ತು ಕಾಶ್ಮೀರದ ತಲಾ 1 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.
ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.