×
Ad

ಮದುವೆಯಾಗುವುದಾಗಿ ನಂಬಿಸಿ ಬಾಲಕಿಯ ದೈಹಿಕ ಸಂಪರ್ಕ: ಆರೋಪಿ ಸೆರೆ

Update: 2019-03-24 18:33 IST

ಬಂಟ್ವಾಳ, ಮಾ. 24: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯ ದೈಹಿಕ ಸಂಪರ್ಕ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಫೋಕ್ಸೊ ಕಾಯ್ದೆಯಡಿ ಆರೋಪಿಯನ್ನು ಪುಂಜಾಲಕಟ್ಟೆ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಬಂಟ್ವಾಳ ತಾಲೂಕಿನ ಚೆನೈತ್ತೊಡಿ ಗ್ರಾಮದ ಮಾವಿನಕಟ್ಟೆಯ ಸೋಮಶೇಖರ ಬಂಧಿತ ಆರೋಪಿ.

ಈತ 2019ರ ಜ. 5ರಂದು ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯ ದೈಹಿಕ ಸಂಪರ್ಕ ನಡೆಸಿದ್ದಾನೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News