ಬೆಂಗಳೂರು ಕೇಂದ್ರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಿಝ್ವಾನ್ ಅರ್ಶದ್ ಕಣಕ್ಕೆ
Update: 2019-03-24 20:02 IST
ಬೆಂಗಳೂರು, ಮಾ.24: ಹಾಲಿ ವಿಧಾನ ಪರಿಷತ್ತಿನ ಸದಸ್ಯ ರಿಝ್ವಾನ್ ಅರ್ಶದ್, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ.
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಚುನಾವಣೆಯಲ್ಲಿ ಮೊದಲನೆ ಬಾರಿಗೆ ಗೆದ್ದು, ಅವರು ಯುವ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. 2014ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಬಿಜೆಪಿಯ ಪಿ.ಸಿ.ಮೋಹನ್ ವಿರುದ್ಧ 1.38ಲಕ್ಷ ಮತಗಳ ಅಂತರದಿಂದ ಅವರು ಸೋತಿದ್ದರು.
ಇನ್ನು, ಈ ಕ್ಷೇತ್ರದಲ್ಲಿನ ವಿಧಾನಸಭೆಯ ಎಂಟು ಕ್ಷೇತ್ರಗಳ ಪೈಕಿ ಐದು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದು, ಈ ಬಾರಿ ರಿಝ್ವಾನ್ ಅರ್ಶದ್ ಅವರು ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.