×
Ad

ಸುಮಲತಾ ಪರವಾಗಿ ಪ್ರಚಾರ ಮಾಡುತ್ತೇವೆ: ಯಡಿಯೂರಪ್ಪ

Update: 2019-03-24 20:31 IST

ಬೆಂಗಳೂರು, ಮಾ.25: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸುಮಲತಾ ಅಂಬರೀಷ್ ಪರವಾಗಿ ನಾನು ಹಾಗೂ ನಮ್ಮ ಪಕ್ಷದ ನಾಯಕರೆಲ್ಲರೂ ಪ್ರಚಾರ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಸುಮಲತಾ ಅಂಬರೀಷ್ ಗೆಲುವು ಖಚಿತವಾಗುತ್ತಿದ್ದಂತೆ ಅದನ್ನು ಸಹಿಸದೆ ಜೆಡಿಎಸ್ ಕಾರ್ಯಕರ್ತರು ದರ್ಶನ್ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ವಾಗ್ದಾಳಿ ನಡೆಸಿದ ಅವರು, ಸುಮಲತಾ ಅವರ ಪರ ನಾನು ಪ್ರಚಾರಕ್ಕೆ ಹೋಗುತ್ತೇನೆ. ನಾನು ಮತ್ತು ನಮ್ಮ ಪಕ್ಷದ ನಾಯಕರೆಲ್ಲರೂ ಅವರ ಪರ ಕೆಲಸ ಮಾಡಿ ಅವರನ್ನು ಗೆಲ್ಲಿಸಲು ಪ್ರಯತ್ನಿಸುತ್ತೇವೆ ಎಂದು ಹೇಳಿದ್ದಾರೆ.

ಮೈತ್ರಿ ಸರಕಾರ ಓಲಾ ಕಂಪನಿಯ ಲೈಸನ್ಸ್ ರದ್ದುಗೊಳಿಸಿ ಎರಡೇ ದಿನಗಳಲ್ಲಿ ರದ್ದು ಮಾಡಿದ್ದ ಆದೇಶವನ್ನು ವಾಪಸ್ ತೆಗೆದಿದೆ. ಚುನಾವಣೆ ಸಮಯದಲ್ಲಿ ಹತ್ತಾರು ಕೋಟಿ ರೂ. ಲೂಟಿ ಮಾಡಲು ಸರಕಾರ ಈ ವಿಧದಲ್ಲಿ ಸಂಚು ರೂಪಿಸಿದೆ ಎಂದು ಸಾಮಾನ್ಯ ಜನರೂ ಮಾತನಾಡಿಕೊಳ್ಳುತ್ತಿದ್ದಾರೆ ಎಂದರು.

ಬೆಂಗಳೂರು ದಕ್ಷಿಣದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ಪರ್ಧಿಸಿದರೆ ಅದು ಅತ್ಯಂತ ಸಂತೋಷದ ವಿಷಯ. ಅವರ ಸ್ಪರ್ಧೆ ಖಚಿತವಾಗುವುದನ್ನು ನಾನೂ ಕಾಯುತ್ತಿದ್ದೇನೆ ಎಂದರು.

ಚುನಾವಣಾ ಆಯೋಗಕ್ಕೆ ದೂರು

ಯಡಿಯೂರಪ್ಪ ವಿರುದ್ಧ ನಕಲಿ ಡೈರಿ ಬಿಡುಗಡೆ ಮಾಡಿ, ಮಿಥ್ಯಾರೋಪ ಮಾಡಿದ ಕಾಂಗ್ರೆಸ್ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಿದ್ದೇವೆ. ಜತೆಗೆ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಕಾಂಗ್ರೆಸ್‌ನ ರಾಷ್ಟ್ರೀಯ ವಕ್ತಾರರ ವಿರುದ್ಧ ದೂರು ದಾಖಲಿಸಲಾಗುವುದು.

- ಅರವಿಂದ್ ಲಿಂಬಾವಳಿ, ಬಿಜೆಪಿ ಮುಖಂಡ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News