×
Ad

'ಪಿಎಂ ನರೇಂದ್ರ ಮೋದಿ' ಚಿತ್ರ ಬಿಡುಗಡೆಗೊಳಿಸದಂತೆ ನಿರ್ಮಾಪಕರಿಗೆ ನಿರ್ದೇಶಿಸಿ ಚುನಾವಣೆ ಆಯೋಗಕ್ಕೆ ಪತ್ರ

Update: 2019-03-24 22:16 IST

ಬೆಂಗಳೂರು, ಮಾ.24: ಪ್ರಧಾನಿ ನರೇಂದ್ರ ಮೋದಿ ಜೀವನಾಧರಿತ ಪಿಎಂ ನರೇಂದ್ರ ಮೋದಿ ಚಿತ್ರ ಬಿಡುಗಡೆ ಮಾಡದಂತೆ ಚಿತ್ರ ನಿರ್ಮಾಪಕರಿಗೆ ನಿರ್ದೇಶನ ನೀಡುವಂತೆ ಕೋರಿ ವಕೀಲ ಎಲ್. ರಮೇಶ್ ನಾಯಕ್ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಲೋಕಸಭೆಗೆ ಚುನಾವಣೆ ನಡೆಯುತ್ತಿದೆ. ದೇಶಾದ್ಯಂತ ಈಗಾಗಲೇ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಇಂತಹ ಸಂದರ್ಭದಲ್ಲಿ ಪ್ರಧಾನಿ ಜೀವನ ಅಧಾರಿತ ಚಿತ್ರ ಬಿಡುಗಡೆಯಾದರೆ ಅದು ದೇಶದ ಮತದಾರರ ಮೇಲೆ ವ್ಯಾಪಕವಾಗಿ ಸಕರಾತ್ಮಕ ಅಥವಾ ನಕರಾತ್ಮಕ ಪ್ರಭಾವ ಬೀರುತ್ತದೆ ಹಾಗೂ ಇದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಲಿದೆ.

ಹೀಗಾಗಿ,ಎ.12ರಂದು ಬಿಡುಗಡೆಗೊಳ್ಳಲಿರುವ ಪಿಎಂ ನರೇಂದ್ರ ಮೋದಿ ಚಿತ್ರ ಬಿಡುಗಡೆ ಮಾಡದಂತೆ ಚಿತ್ರ ನಿರ್ಮಾಪಕರು ಹಾಗೂ ಸಂಬಂಧಪಟ್ಟ ಇತರರಿಗೆ ನಿರ್ದೇಶನ ನೀಡಬೇಕು ಎಂದು ವಕೀಲ ರಮೇಶ್ ನಾಯಕ್ ಚುನಾವಣಾ ಆಯೋಗವನ್ನು ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News