ಜೂಜಾಟ, ಕ್ಲಬ್ ಮೇಲೆ ದಾಳಿ: 20 ಜನರ ಬಂಧನ

Update: 2019-03-24 16:48 GMT

ಬೆಂಗಳೂರು, ಮಾ.24: ಹಣ ಪಣವಾಗಿ ಕಟ್ಟಿಕೊಂಡು ಜೂಜಾಟ ಆಡುತ್ತಿದ್ದ ಆರೋಪದಡಿ ಕ್ಲಬ್‌ಯೊಂದರ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು, 20 ಜನರನ್ನು ಬಂಧಿಸಿ, 80 ಸಾವಿರ ರೂ. ನಗದು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ರಾಜರಾಜೇಶ್ವರಿ ನಗರದ ಬಿಇಎಂಎಲ್ ಕಾಂಪ್ಲೆಕ್ಸ್ ಎದುರಿನ ಮಹಡಿಯೊಂದರ ಚಾಮುಂಡೇಶ್ವರಿ ಅಸೋಸಿಯೇಷನ್ ಕ್ಲಬ್‌ನಲ್ಲಿ ಸದಸ್ಯರಲ್ಲದ ಕೆಲವು ಜನ ಹಣವನ್ನು ಪಣವಾಗಿ ಕಟ್ಟಿಕೊಂಡು ಇಸ್ಪೀಟ್ ಜೂಜಾಟವನ್ನು ಆಡುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಸಿಸಿಬಿ ಡಿಸಿಪಿ ಎಸ್.ಗಿರೀಶ್ ತಿಳಿಸಿದ್ದಾರೆ.

ಬಂಧಿತರಿಂದ ಜೂಜಾಟಕ್ಕೆ ಸಂಬಂಧಿಸಿದ 80 ಸಾವಿರ ರೂ. ನಗದು ಜಪ್ತಿ ಮಾಡಿ, ಇಲ್ಲಿನ ಆರ್‌ಆರ್‌ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News