ಅನಂತ್‌ನಾಗ್‌ನಿಂದ ಮೆಹಬೂಬಾ ಮುಫ್ತಿ ಸ್ಪರ್ಧೆ

Update: 2019-03-24 18:29 GMT

ಶ್ರೀನಗರ, ಮಾ.24: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅನಂತನಾಗ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು ಪೀಪಲ್ಸ್ ಡೆಮಾಕ್ರಾಟಿಕ್ ಪಾರ್ಟಿ (ಪಿಡಿಪಿ) ತಿಳಿಸಿದೆ.

 ಇದೇ ವೇಳೆ, ಜಾತ್ಯಾತೀತ ಮತಗಳ ವಿಭಜನೆ ತಪ್ಪಿಸುವ ಉದ್ದೇಶದಿಂದ ಜಮ್ಮು ಮತ್ತು ಉಧಾಂಪುರ್ ಕ್ಷೇತ್ರದಿಂದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸದಿರಲು ನಿರ್ಧರಿಸಲಾಗಿದೆ ಎಂದು ಪಿಡಿಪಿ ಅಧ್ಯಕ್ಷರೂ ಆಗಿರುವ ಮೆಹಬೂಬಾ ಮುಫ್ತಿ ಹೇಳಿದ್ದಾರೆ.

ಶ್ರೀನಗರದಿಂದ ಮೊಹ್ಸಿನ್ , ಕಾರ್ಮಿಕರ ಯೂನಿಯನ್ ಮಾಜಿ ಅಧ್ಯಕ್ಷ ಅಬ್ದುಲ್ ಖಯೂಮ್ ವಾನಿ ಬಾರಾಮುಲ್ಲ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಪಕ್ಷ ಈಗಾಗಲೇ ಘೋಷಿಸಿದೆ. ಲಡಾಕ್ ಕ್ಷೇತ್ರದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಗ್ಗೆ ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ಆದರೆ ಜಾತ್ಯಾತೀತ ಮತಗಳ ವಿಭಜನೆ ತಪ್ಪಿಸುವ ಉದ್ದೇಶದಿಂದ ಜಮ್ಮು ವಲಯದ ಎರಡು ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸದಿರಲು ನಿರ್ಧರಿಸಲಾಗಿದೆ ಎಂದು ಮೆಹಬೂಬಾ ಮುಫ್ತಿ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News