ಎಸ್ ಡಿಪಿಐ ಅಭ್ಯರ್ಥಿ ಇಲ್ಯಾಸ್ ತುಂಬೆ ನಾಮಪತ್ರ ಸಲ್ಲಿಕೆ

Update: 2019-03-25 09:22 GMT

ಮಂಗಳೂರು, ಮಾ.25: ದ.ಕ. ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿರುವ ಎಸ್ ಡಿಪಿಐ ಅಭ್ಯರ್ಥಿ ಇಲ್ಯಾಸ್ ಮುಹಮ್ಮದ್ ತುಂಬೆ ಸೋಮವಾರ ಮಧ್ಯಾಹ್ನ ನಾಮಪತ್ರ ಸಲ್ಲಿಸಿದರು.

ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಪಕ್ಷದ ಮುಖಂಡರಾದ ಅಥಾವುಲ್ಲಾ ಜೋಕಟ್ಟೆ, ಹನೀಫ್ ಖಾನ್ ಕೊಡಾಜೆ, ರಿಯಾಝ್ ಫರಂಗಿಪೇಟೆ ಮತ್ತಿತರರು ಉಪಸ್ಥಿತರಿದ್ದರು.

ಇದಕ್ಕೂ ಮೊದಲು ಹಂಪನಕಟ್ಟೆ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ನಡೆಸಲಾಯಿತು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News