ದ.ಕ.: ಕಾಂಗ್ರೆಸ್ –ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಿಥುನ್ ರೈ ನಾಮಪತ್ರ ಸಲ್ಲಿಕೆ

Update: 2019-03-25 09:27 GMT

ಮಂಗಳೂರು, ಮಾ.25: ದ.ಕ. ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ –ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿರುವ ಕಾಂಗ್ರೆಸ್ ಯುವ ನಾಯಕ ಮಿಥುನ್ ರೈ ಸೋಮವಾರ ಮಧ್ಯಾಹ್ನ ನಾಮಪತ್ರ ಸಲ್ಲಿಸಿದರು.

ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಪಕ್ಷದ ಮುಖಂಡರಾದ ಜನಾರ್ದನ ಪೂಜಾರಿ, ರಮಾನಾಥ ರೈ, ಯು.ಟಿ.ಖಾದರ್, ಜೆಡಿಎಸ್ ಮುಖಂಡ ಅಮರನಾಥ ಶೆಟ್ಟಿ ಉಪಸ್ಥಿತರಿದ್ದರು.

ಇದಕ್ಕೂ ಮೊದಲು ನಗರದ ಪುರಭವನದ ಬಳಿ ಕಾರ್ಯಕರ್ತರ ಸಮಾವೇಶ ಆಯೋಜಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News