ಐಟಿ ದಾಳಿ ಪ್ರಕರಣ: ಪ್ರಕರಣ ರದ್ದು ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಡಿಕೆಶಿ

Update: 2019-03-25 18:01 GMT

ಬೆಂಗಳೂರು, ಮಾ.25: ಸಚಿವ ಡಿ.ಕೆ.ಶಿವಕುಮಾರ್‌ಗೆ ವಿಚಾರಣೆಗೆ ಹಾಜರಾಗಲು ಇಡಿ ನೀಡಿದ್ದ ಸಮನ್ಸ್ ನೋಟಿಸ್ ವಿಚಾರಕ್ಕೆ ಸಂಬಂಧಿಸಿದಂತೆ ಡಿಕೆಶಿ ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಶೇಷ ನ್ಯಾಯಾಲಯಕ್ಕೆ ಸಂಪೂರ್ಣ ಪ್ರಕರಣ ರದ್ದುಕೋರಿ ಅರ್ಜಿ ಸಲ್ಲಿಸಿದ್ದಾರೆ. 

ಈ ವೇಳೆ ಐಟಿ ಪರ ವಕೀಲರು, ಡಿಕೆಶಿ ವಿರುದ್ಧ ದಾಖಲಾಗಿರುವ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಹೀಗಾಗಿ, ಯಾವುದೇ ಕಾರಣಕ್ಕೂ ಡಿಕೆಶಿ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಬಾರದು ಎಂದು ಪೀಠಕ್ಕೆ ಮನವಿ ಮಾಡಿದರು.

ಯಾಕೆ ಅರ್ಜಿ: ಕಳೆದ ವರ್ಷ ಐಟಿ ದಾಳಿ ಮಾಡಿ ನಂತರ ಇಡಿಗೆ ಮಾಹಿತಿ ರವಾನೆ ಮಾಡಿತ್ತು. ಹವಾಲ ದಂಧೆಯಲ್ಲಿ ಡಿಕೆಶಿ ಮತ್ತು ಡಿಕೆಶಿ ಆಪ್ತರು ನಡೆಸುತ್ತಿದ್ದಾರೆ ಎಂದು ಐಟಿ ಆರೋಪಿಸಿತ್ತು. ಈ ಹಿನ್ನೆಲೆಯಲ್ಲಿ ಇಡಿ ಅವರು ಡಿಕೆಶಿ ಮತ್ತು ಡಿಕೆಶಿ ಆಪ್ತರ ವಿರುದ್ಧ ಪ್ರಕರಣ ದಾಖಲಿಸಿ ಸಮನ್ಸ್ ಜಾರಿಗೊಳಿಸಿತ್ತು. ಈ ಪ್ರಕರಣಕ್ಕೆ ತಡೆ ನೀಡಲು ಹಾಗೂ ಈ ಪ್ರಕರಣವನ್ನು ರದ್ದುಕೋರಿ ಹೈಕೋರ್ಟ್‌ಗೆ ಅರ್ಜಿ ಹಾಕಿದ್ದರು. ಆದರೆ, ಡಿಕೆಶಿ ಅವರು ಪ್ರಕರಣವನ್ನು ರದ್ದುಕೋರಿ ಮತ್ತೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಹಾಕಿದ್ದಾರೆ. ಅಲ್ಲದೆ, ಡಿಕೆಶಿ ಮತ್ತು ಸಚಿನ್ ನಾರಾಯಣ್ ಕೋರ್ಟ್‌ಗೆ ಹಾಜರಾಗದೆ ಇದ್ದು ಹಾಜರಾತಿಗೆ ವಿನಾಯಿತಿ ಕೋರಿ ಡಿಕೆಶಿ ಪರ ವಕೀಲರು ಅರ್ಜಿ ಸಲ್ಲಿಕೆ ಮಾಡಿದ್ದರಿಂದ ಪ್ರಕರಣದ ವಿಚಾರಣೆಯನ್ನು ಮಾ.30ಕ್ಕೆ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News