ರಂಗೇರಿದ ಲೋಕಾ ಅಖಾಡ

Update: 2019-03-25 18:19 GMT

ಲೋಕಸಭೆ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಮಾಜಿ ಪ್ರಧಾನಿ ದೇವೇಗೌಡ, ಕೆ.ಎಚ್. ಮುನಿಯಪ್ಪ, ಡಾ.ಎಂ. ವೀರಪ್ಪ ಮೊಯ್ಲಿ, ರಿಝ್ವಿನ್ ಅರ್ಶದ್, ಕೇಂದ್ರ ಸಚಿವ ಸದಾನಂದಗೌಡ, ನಿಖಿಲ್ ಕುಮಾರಸ್ವಾಮಿ, ಎ.ಮಂಜು, ಮುದ್ದಹನುಮೇಗೌಡ ಸೇರಿದಂತೆ ಘಟಾನುಘಟಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮೂಲಕ ಶಕ್ತಿ ಪ್ರದರ್ಶನ ನಡೆಸಿದರು. ಎಪ್ರಿಲ್ 18ರಂದು ನಡೆಯಲಿರುವ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆ ಮಂಗಳವಾರ ಕೊನೆಯ ದಿನವಾಗಿರುವ ಹಿನ್ನೆಲೆಯಲ್ಲಿ ಬಹುತೇಕ ರಾಜಕೀಯ ಪಕ್ಷಗಳ ಘಟಾನುಘಟಿ ಅಭ್ಯರ್ಥಿಗಳಿಂದು ದೇವರಿಗೆ ಪೂಜೆ ಸಲ್ಲಿಸಿ, ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿ ಗಳೊಂದಿಗೆ ಅದ್ದೂರಿ ಮೆರವಣಿಗೆ ಮೂಲಕ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor