ಕ್ರಿಕೆಟ್ ಬೆಟ್ಟಿಂಗ್: ಮೂವರು ಆರೋಪಿಗಳ ಬಂಧನ

Update: 2019-03-26 11:30 GMT

ಮಂಗಳೂರು, ಮಾ.26: ನಗರದಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಅನಿಲ್, ಭಾನುಕೇಶ್ ಹಾಗೂ ಜೇಮ್ಸ್ ಬಂಧಿತ ಆರೋಪಿಗಳು. ಇವರಿಂದ 62,700 ರೂ. ನಗದು, ನಾಲ್ಕು ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಆನ್‌ಲೈನ್ ಮೂಲಕ ಬೆಟ್ಟಿಂಗ್ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News