ದೇವೇಗೌಡರನ್ನು ಭೇಟಿ ಮಾಡಿದ ‘ಕೈ’ ಅಭ್ಯರ್ಥಿಗಳು

Update: 2019-03-26 17:05 GMT

ಬೆಂಗಳೂರು, ಮಾ.26: ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.

ಮಂಗಳವಾರ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೃಷ್ಣಭೈರೇಗೌಡ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್ ಹಾಗೂ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಿಝ್ವಾನ್ ಅರ್ಶದ್ ಭೇಟಿ ನೀಡಿದರು.

ಮೂವರು ಅಭ್ಯರ್ಥಿಗಳು, ದೇವೇಗೌಡ ಹಾಗೂ ಅವರ ಪತ್ನಿ ಚನ್ನಮ್ಮ ಆಶೀರ್ವಾದ ಪಡೆದುಕೊಂಡರು. ಈ ವೇಳೆ ಸಚಿವ ಝಮೀರ್‌ ಅಹ್ಮದ್‌ ಖಾನ್, ಸಂಸದ ಎಲ್.ಆರ್.ಶಿವರಾಮೇಗೌಡ, ಶಾಸಕರಾದ ಗೋಪಾಲಯ್ಯ, ಅಖಂಡ ಶ್ರೀನಿವಾಸಮೂರ್ತಿ, ವಿಧಾನಪರಿಷತ್ ಸದಸ್ಯರಾದ ಎಂ.ಸಿ.ವೇಣುಗೋಪಾಲ್, ಟಿ.ಎ.ಶರವಣ, ಎಂ.ನಾರಾಯಣಸ್ವಾಮಿ, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಕೋನರೆಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News