ಆರ್‌ಸಿಬಿ-ಮುಂಬೈ ನಡುವೆ ಐಪಿಎಲ್ ಪಂದ್ಯ: ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ನಿರ್ಬಂಧ

Update: 2019-03-26 18:06 GMT

ಬೆಂಗಳೂರು, ಮಾ. 26: ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮಾ.28 ರಂದು ಆರ್‌ಸಿಬಿ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಐಪಿಎಲ್-ಟಿ-20 ಕ್ರಿಕೆಟ್ ಪಂದ್ಯ ನಡೆಯಲಿದ್ದು, ಪಂದ್ಯದ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ವಾಹನಗಳಲ್ಲಿ ಬರುವುದರಿಂದ ಸ್ಟೇಡಿಯಂ ಸುತ್ತಮುತ್ತ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ.

ಸಂಚಾರ ನಿರ್ಬಂಧ: ಕೆಳಕಂಡ ರಸ್ತೆಗಳಲ್ಲಿ ಮಧ್ಯಾಹ್ನ 2ಗಂಟೆಯಿಂದ ರಾತ್ರಿ 11:30ರ ವರೆಗೆ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ. ಕ್ವೀನ್ಸ್ ರಸ್ತೆಯಲ್ಲಿ, ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ. ಎಂ.ಜಿ ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ. ಲಿಂಕ್ ರಸ್ತೆಯಲ್ಲಿ ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆ ವರೆಗೆ. ರಾಜಭವನ ರಸ್ತೆ, ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆಗಳಲ್ಲಿ. ಸೆಂಟ್ರಲ್ ಸ್ಟ್ರೀಟ್ ರಸ್ತೆಯಲ್ಲಿ ರಸ್ತೆಯ ಎರಡೂ ಕಡೆ. ಕಬ್ಬನ್ ರಸ್ತೆಯಲ್ಲಿ, ಸಿ.ಟಿ.ಓ. ವೃತ್ತದಿಂದ ಡಿಕೆನ್ಸ್‌ನ್ ರಸ್ತೆ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಕಡೆ. ಕಬ್ಬನ್ ರಸ್ತೆಯಲ್ಲಿ ಕಾಮರಾಜ ರಸ್ತೆ ಜಂಕ್ಷನ್‌ನಿಂದ ಡಿಕೆನ್ಸ್‌ನ್ ರಸ್ತೆ ಜಂಕ್ಷನ್‌ವರೆಗೆ ಬಿಎಂಟಿಸಿ ಬಸ್‌ಗಳನ್ನು ಹೊರತುಪಡಿಸಿ ಇತರೆ ಎಲ್ಲ ತರಹದ ವಾಹನಗಳ ನಿಲುಗಡೆಯನ್ನು ನಿಷೇಧಿಸಿದೆ. 

ಸೆಂಟ್ ಮಾರ್ಕ್ಸ್ ರಸ್ತೆಯಲ್ಲಿ, ಕ್ಯಾಶ್ ಫಾರ್ಮಸಿ ಜಂಕ್ಷನ್‌ನಿಂದ ಅನಿಲ್ ಕುಂಬ್ಳೆ ವೃತ್ತದವರೆಗೆ. ಮ್ಯೂಸಿಯಂ ರಸ್ತೆಯಲ್ಲಿ, ಎಂ.ಜಿ ರಸ್ತೆಯಿಂದ ಸೆಂಟ್ ಮಾರ್ಕ್ಸ್ ರಸ್ತೆವರೆಗೆ ಹಾಗೂ ಆಶಿರ್ವಾದಂ ವೃತ್ತದವರೆಗೆ, ಕಸ್ತೂರಬಾ ರಸ್ತೆಯಲ್ಲಿ, ಕ್ವೀನ್ಸ್‌ವೃತ್ತದಿಂದ ಹಡ್ಸನ್ ವೃತ್ತದವರೆಗೆ ಹಾಗೂ ಮಲ್ಯ ಆಸ್ಪತ್ರೆ ರಸ್ತೆಯಲ್ಲಿ ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್.ಎಂ.ಆರ್ ವೃತ್ತದವರೆಗೆ.

ಕಬ್ಬನ್‌ಪಾರ್ಕ್ ಒಳಭಾಗದ ಕಿಂಗ್ ರಸ್ತೆ, ಪ್ರೆಸ್ ಕ್ಲಬ್ ಮುಂಭಾಗ, ಬಾಲಭವನ ಮುಂಭಾಗ, ಫೌಂಟೇನ್ ರಸ್ತೆಗಳಲ್ಲಿ ವಾಹನಗಳ ಪಾರ್ಕಿಂಗ್ ಕಡ್ಡಾಯವಾಗಿ ನಿಷೇಧಿಸಲಾಗಿದೆ. ಲ್ಯಾವೆಲ್ಲಿ ರಸ್ತೆಯಲ್ಲಿ, ಕ್ವೀನ್ಸ್ ವೃತ್ತದಿಂದ ವಿಠಲ್ ಮಲ್ಯ ರಸ್ತೆ ಜಂಕ್ಷನ್‌ವರೆಗೆ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ. ವಿಠಲ್ ಮಲ್ಯ ರಸ್ತೆ, ಸಿದ್ದಲಿಂಗಯ್ಯ ವೃತ್ತದಿಂದ ಸೆಂಟ್ ಮಾರ್ಕ್ಸ್ ರಸ್ತೆಯ ಬಿಷಪ್‌ಕಾಟನ್ ಬಾಲಕಿಯರ ಶಾಲೆಯವರೆಗೆ ವಾಹನಗಳ ನಿಲುಗಡೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ

ಈ ಕೆಳಕಂಡ ರಸ್ತೆಗಳಲ್ಲಿ ಮಧ್ಯಾಹ್ನ 5ಗಂಟೆಯಿಂದ ರಾತ್ರಿ 11-30ರ ವರೆಗೆ ಆಟೋ ರಿಕ್ಷಾ ಸಂಚಾರವನ್ನು ನಿಷೇಧಿಸಲಾಗಿದೆ. ಕ್ವೀನ್ಸ್‌ರಸ್ತೆ, ಟ್ರಾಫಿಕ್ ಹೆಡ್‌ಕ್ವಾರ್ಟರ್ ಜಂಕ್ಷನ್‌ನಿಂದ ಕ್ವೀನ್ಸ್ ವೃತ್ತದವರೆಗೆ (ರಸ್ತೆಯ ಎರಡೂ ಬದಿ). ಕಬ್ಬನ್ ರಸ್ತೆ, ಬಿ.ಆರ್. ಜಂಕ್ಷನ್‌ನಿಂದ ಸಿಟಿಓ ವೃತ್ತದವರೆಗೆ (ರಸ್ತೆಯ ಎರಡೂ ಬದಿ). ಎಂಜಿ ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್‌ವೃತ್ತದ ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ.

ವಾಹನ ನಿಲುಗಡೆ: ಪಂದ್ಯ ವೀಕ್ಷಣೆ ಮಾಡಲು ಬರುವ ಸಾರ್ವಜನಿಕರ ವಾಹನಗಳನ್ನು ಸೆಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನ ಮತ್ತು ಯುಬಿ ಸಿಟಿ ನಿಲುಗಡೆ ಸ್ಥಳದಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಶಿವಾಜಿನಗರ ಬಸ್ ನಿಲ್ದಾಣದ 1ನೇ ಮಹಡಿಯಲ್ಲಿ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.

ಕೆಎಸ್‌ಸಿಎ ಸದಸ್ಯರ ವಾಹನಗಳನ್ನು ಬೌರಿಂಗ್ ಇನ್‌ಸ್ಟಿಟ್ಯೂಟ್ ಮತ್ತು ಸೆಂಟ್ ಜೋಸೆಫ್ (ಯೂರೋಪಿಯನ್) ಬಾಲಕರ ಶಾಲೆ ಮೈದಾನ (ಮ್ಯೂಸಿಯಂ ರಸ್ತೆ) ಇಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತ ಮುತ್ತ ವಾಹನಗಳ ನಿಲುಗಡೆ ಸ್ಥಳ ಕೊರತೆ ಇರುವುದರಿಂದ ಹಾಗೂ ಕ್ರೀಡಾಂಗಣ ಸುತ್ತ ಮುತ್ತ ಸಂಚಾರ ದಟ್ಟಣೆ ತಪ್ಪಿಸಲು ಕ್ರಿಕೆಟ್ ಪಂದ್ಯ ವೀಕ್ಷಣೆಗೆ ಬರುವ ಪ್ರೇಕ್ಷಕರು ಸಾರ್ವಜನಿಕ ಸಾರಿಗೆ (ಬಿಎಂಟಿಸಿ) ವಾಹನಗಳನ್ನು ಹಾಗೂ ಮೆಟ್ರೋ ಸೇವೆಯನ್ನು ಬಳಸಲು ಕೋರಿದೆ. ವಿಶೇಷ ಕರ್ತವ್ಯಕ್ಕೆ ನಿಯೋಜನೆ ಮಾಡಿರುವ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳ ವಾಹನಗಳನ್ನು ಕಬ್ಬನ್‌ಪಾರ್ಕ್ ಒಳಭಾಗದ ಕೆ.ಜಿ.ಐ.ಡಿ ಬಿಲ್ಡಿಂಗ್ ಮುಂಭಾಗದ ಪಾರ್ಕಿಂಗ್ ಸ್ಥಳದಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಎಂ.ಜಿ.ರಸ್ತೆಯಲ್ಲಿರುವ ಫ್ರೀಪೇಯ್ಡೆ ಆಟೋ ನಿಲ್ದಾಣವನ್ನು ಬಳಸಲು ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.

ವೀಕ್ಷಕರಿಗೆ: ಗೇಟ್‌ನಂ-1 ರಿಂದ ಗೇಟ್ ನಂ-6 ಕಬ್ಬನ್ ರಸ್ತೆಯಲ್ಲಿದ್ದು ಪಾದಚಾರಿಗಳಿಗೆ/ವೀಕ್ಷಕರುಗಳಿಗೆ ಹೋಗಲು ಅವಕಾಶ ಕಲ್ಪಿಸಿದೆ. ಗೇಟ್ ನಂ.7 ರಿಂದ ಗೇಟ್ ನಂ 11ರ ವರೆಗೆ ಲಿಂಕ್ ರಸ್ತೆಯಲ್ಲಿದ್ದು ಅನಿಲ್ ಕುಂಬ್ಳೆ ವೃತ್ತ ಮತ್ತು ಬಿಆರ್‌ವಿ ವೃತ್ತದ ಕಡೆುಂದ ಪ್ರೇಕ್ಷಕರುಗಳು/ಪಾದಚಾರಿಗಳು ಹೋಗಬಹುದು. ಗೇಟ್ ನಂ.12ರಿಂದ 21ರ ವರೆಗೆ ಕ್ವೀನ್ಸ್‌ರಸ್ತೆಯಲ್ಲಿದ್ದು, ಇಲ್ಲಿಗೆ ಪಾದಚಾರಿ/ವೀಕ್ಷಕರುಗಳಿಗೆ ಪ್ರವೇಶವನ್ನು ಕಲ್ಪಿಸಲಾಗಿರುತ್ತದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News