2ನೆ ಹಂತದ ಮತದಾನ: ರಾಜ್ಯದ 14 ಕ್ಷೇತ್ರಗಳಿಗೆ ಮಾ.28ರಂದು ಅಧಿಸೂಚನೆ

Update: 2019-03-27 12:53 GMT

ಬೆಂಗಳೂರು, ಮಾ.27: ಎರಡನೆ ಹಂತದಲ್ಲಿ ಚುನಾವಣೆ ನಡೆಯುವ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮಾ.28ರಂದು ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬೀದರ್, ದಾವಣಗೆರೆ, ಹಾವೇರಿ, ಬಳ್ಳಾರಿ, ರಾಯಚೂರು, ಕೊಪ್ಪಳ, ಕಲಬುರಗಿ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಆಯಾ ಚುನಾವಣಾಧಿಕಾರಿಗಳು ನಾಳೆ ಅಧಿಸೂಚನೆ ಹೊರಡಿಸಲಿದ್ದಾರೆ.

ಪ್ರಮುಖ ರಾಜಕೀಯ ಪಕ್ಷಗಳು ಈಗಾಗಲೆ ಬಹುತೇಕ ತಮ್ಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪಟ್ಟಿ ಪ್ರಕಟಿಸಿರುವುದರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯೂ ಚುರುಕಾಗಲಿದೆ. ನಾಳೆಯಿಂದ(ಮಾ.28) ಪ್ರಾರಂಭಗೊಂಡು ಎ.4ರವರೆಗೂ ನಾಮಪತ್ರ ಸಲ್ಲಿಸಲು ಕಾಲಾವಕಾಶವಿದೆ. ಎ.5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಎ.8ರವರೆಗೂ ನಾಮಪತ್ರ ಹಿಂಪಡೆಯಲು ಅವಕಾಶವಿದೆ. ಎ.23ರಂದು ಮತದಾನ ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News