ಮಾ.28: ಪಿಪಿಸಿಯಲ್ಲಿ ಜಲಸಂರಕ್ಷಣೆಯ ‘ಹನಿಧ್ವನಿ’
Update: 2019-03-27 18:42 IST
ಉಡುಪಿ, ಮಾ.27: ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಕನ್ನಡ ವಿಭಾಗ ಮತ್ತು ಸಾಂಸ್ಕೃತಿಕ ಸಂಘದ ಆಶ್ರಯದಲ್ಲಿ ಜಲಸಂರಕ್ಷಣೆ ಕುರಿತು ವಿಶೇಷ ಉಪನ್ಯಾಸ ಹಾಗೂ ಸಂಸ್ಥೆಯ ವಿದ್ಯಾರ್ಥಿ,ವಿದ್ಯಾರ್ಥಿನಿಯರಿಂದ ಹನಿಧ್ವನಿ ಕಿರು ಪ್ರಹಸನ ಮಾ.28ರ ಅಪರಾಹ್ನ 3 ಗಂಟೆಗೆ ಕಾಲೇಜಿನ ಮುಖ್ಯ ಸಭಾಂಗಣದಲ್ಲಿ ಸಂಪನ್ನಗೊಳ್ಳಲಿದೆ.
ಕಾರ್ಯಕ್ರಮದಲ್ಲಿ ಶ್ರೀಅದಮಾರು ಮಠ ಶಿಕ್ಷಣ ಮಂಡಳಿಯ ಉಪಾಧ್ಯಕ್ಷ ರಾಗಿರುವ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಆಶೀರ್ವಚನ ನೀಡಲಿದ್ದು, ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಜಗದೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ಸಂಪನ್ಮೂಲ ವ್ಯಕ್ತಿಗಳಾದ ಜೋಸೆಫ್ ಜಿ.ಎಂ.ರೆಬೆಲ್ಲೋ ಹಾಗೂ ಉಡುಪಿಯ ನ್ಯಾಯವಾದಿ ಪ್ರದೀಪ್‌ಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.