×
Ad

ಮಾ.28: ಕಾಪು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ

Update: 2019-03-27 18:45 IST

ಉಡುಪಿ, ಮಾ. 27: ಕಾಪು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ ಕಾಪು ಜೆ.ಸಿ. ಸಭಾಭವನದಲ್ಲಿ ಮಾ.28ರ ಅಪರಾಹ್ನ 3 ಗಂಟೆಗೆ ನಡೆಯಲಿದೆ. ಅಲ್ಲದೇ ಕಾಪು ಉತ್ತರ ಬ್ಲಾಕ್ ಕಾಂಗ್ರೆಸ್ ಸಭೆ ಸಂಜೆ 5 ಕ್ಕೆ ಹಿರಿಯಡ್ಕ ದೇವಾಡಿಗ ಸಭಾಭವನದಲ್ಲಿ ಜರಗಲಿದೆ.

ಸಭೆಯಲ್ಲಿ ಕಾಪು ಮಾಜಿ ಶಾಸಕ ಹಾಗೂ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹಾಗೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಅಲ್ಲದೇ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಭಾಗವಹಿಸಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನವೀನ್‌ಚಂದ್ರ ಸುವರ್ಣ ಹಾಗೂ ಪ್ರವೀಣ್ ಶೆಟ್ಟಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News