ಮಾ.29-30ರಂದು ಮಂಗಳೂರು ವಿವಿಯಲ್ಲಿ ರಾಷ್ಟ್ರೀಯ ಸಮ್ಮೇಳನ
Update: 2019-03-27 19:04 IST
ಕೊಣಾಜೆ: ಮಂಗಳೂರು ವಿಶ್ವವಿದ್ಯಾಲಯದ ಸಮಾಜ ಕಾರ್ಯ ವಿಭಾಗದ ಆಶ್ರಯದಲ್ಲಿ `ಸ್ವಚ್ಚ ಭಾರತ್: ಸಮಾಜಕಾರ್ಯ ದೃಷ್ಟಿಕೋನದಲ್ಲಿ ಸಮುದಾಯ ಆರೋಗ್ಯ' ಎಂಬ ವಿಷಯದಲ್ಲಿ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವು ಮಾ.29 ಮತ್ತು 30ರಂದು ಮಂಗಳೂರು ವಿವಿಯ ಲೆಕ್ಚರ್ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ.
ಸಮ್ಮೇಳನದ ಉದ್ಘಾಟನೆಯನ್ನು ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ ಅವರು ಉದ್ಘಾಟಿಸಲಿದ್ದು, ವಿಜಯಪುರದ ಅಕ್ಕಾಮಹಾದೇವಿ ವಿಶ್ವವಿದ್ಯಾಲಯದ ಪ್ರೊ.ಎಸ್.ಎ.ಖಾಝಿ, ಶಿವಮೊಗ್ಗ ಕುವೆಂಪು ವಿಶ್ವವಿದ್ಯಾಲಯದ ಪ್ರೊ.ರವೀಂದ್ರ ಗಡ್ಕರ್ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ. ಕಿಶೋರಿ ನಾಯಕ್ ಅವರು ವಹಿಸಲಿದ್ದಾರೆ ಎಂದು ರಾಷ್ಟ್ರೀಯ ಸಮ್ಮೇಳನದ ಸಂಘಟನಾ ಕಾರ್ಯದರ್ಶಿ ಡಾ.ಮೋಹನ್ ಸಿಂಘೆ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.