ಪ್ರಕಾಶ್ ರೈ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಚಾರಣೆಗೆ ಹಾಜರಾಗಲು ಸಮಯಾವಕಾಶ ಕೇಳಿದ ಪ್ರತಾಪ್ ಸಿಂಹ

Update: 2019-03-27 16:39 GMT

ಬೆಂಗಳೂರು, ಮಾ.27: ಮೈಸೂರು-ಮಡಿಕೇರಿ ಸಂಸದ ಪ್ರತಾಪ್ ಸಿಂಹ ಸಾಮಾಜಿಕ ಜಾಲತಾಣದಲ್ಲಿ ಬಹುಭಾಷಾ ನಟ ಪ್ರಕಾಶ್ ರೈ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ಮಾ.27ರಂದು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರಾಗಬೆಕಿತ್ತು. ಆದರೆ, ಲೋಕಸಭಾ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಸಮಯಾವಕಾಶ ಕೇಳಿ ಪ್ರತಾಪ್ ಸಿಂಹ ಅರ್ಜಿ ಸಲ್ಲಿಸಿದ್ದಾರೆ.

ಮೈಸೂರಿನಲ್ಲಿ ಲೋಕಸಭೆ ಚುನಾವಣೆಗೆ ಪ್ರತಾಪ್ ಸಿಂಹ ಅವರು ಸ್ಪರ್ಧೆ ಮಾಡುತ್ತಿದ್ದಾರೆ. ಹೀಗಾಗಿ ಮೈಸೂರಿನಲ್ಲಿ ಪ್ರಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನಿಂದ ಬೆಂಗಳೂರಿಗೆ ಬರಲು ಸಾದ್ಯವಿಲ್ಲ. ಹೀಗಾಗಿ, ಸಮಯಾವಕಾಶ ನೀಡಬೇಂಕೆದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಜನಪ್ರತಿನಿಗಳ ನ್ಯಾಯಾಲಯದ ನ್ಯಾ. ರಾಮಚಂದ್ರ ಹುದ್ದಾರ್ ವಿಚಾರಣೆ ಮುಂದೂಡಿಕೆ ಮಾಡಿದ್ದಾರೆ.

ಇದಕ್ಕೂ ಮುಂಚೆ ಸಂಸದ ಪ್ರತಾಪ್ ಸಿಂಹ ತನ್ನ ವಿರುದ್ಧ ನೀಡಲಾಗಿದ್ದ ವಾರೆಂಟ್ ರಿಕಾಲ್‌ಗಾಗಿ ಕೋರ್ಟ್ ಮುಂದೆ ಹಾಜರಾಗಿದ್ದರು. ಈ ವೇಳೆ ಕೋರ್ಟ್ ಬರೋಬ್ಬರಿ 7 ಗಂಟೆಗಳ ಕಾಲ ಕಸ್ಟಡಿಗೆ ಪಡೆದಿತ್ತು. ಸಮನ್ಸ್‌ಗೆ ಹಾಜರಾಗದಿದ್ದಕ್ಕೆ 100ರೂಪಾಯಿಗಳ ದಂಡವನ್ನು ಹಾಕಿದರಲ್ಲದೆ, ಅವರಿಂದ 10 ಸಾವಿರ ರೂಪಾಯಿ ಶ್ಯೂರಿಟಿ ಪಡೆದು ಸರಿಯಾಗಿ ವಿಚಾರಣೆಗೆ ಬರುವಂತೆ ಖಡಕ್ ಸೂಚನೆ ನೀಡಿತ್ತು. ಇದೀಗ ಮತ್ತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಮಯಾವಕಾಶ ಕೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News