×
Ad

ಮಂಡ್ಯ ಲೋಕಸಭಾ ಕ್ಷೇತ್ರ: 26 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ, ಎರಡು ತಿರಸ್ಕೃತ

Update: 2019-03-27 22:25 IST

ಮಂಡ್ಯ, ಮಾ.27: ಲೋಕಸಭಾ ಚುನಾವಣೆಯ ನಾಮಪತ್ರಗಳ ಪರಿಶೀಲನೆ ಬುಧವಾರ ನಡೆದಿದ್ದು, ಎರಡು ನಾಮಪತ್ರಗಳು ತಿರಸ್ಕೃತ ಗೊಂಡಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಎನ್.ಮಂಜುಶ್ರೀ ತಿಳಿಸಿದ್ದಾರೆ. 

ಚುನಾವಣೆ ಕಣಕ್ಕೆ 27 ಅಭ್ಯರ್ಥಿಗಳು ಒಟ್ಟು 37 ಉಮೇದುವಾರಿಕೆ ಸಲ್ಲಿಸಿದ್ದು, ಈ ಪೈಕಿ 26 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿವೆ. ಐರಾ ನ್ಯಾಷನಲ್ ಪಾರ್ಟಿಯಿಂದ 2 ನಾಮಪತ್ರ ಸಲ್ಲಿಸಿದ್ದ ಡಿ.ಸಿ.ಜಯಶಂಕರ್ ಅವರ ಒಂದು ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಶಂಭುಲಿಂಗೇಗೌಡ ಅವರ ನಾಮಪತ್ರ ತಿರಸ್ಕೃತವಾಗಿವೆ ಎಂದು ಅವರು ಹೇಳಿದ್ದಾರೆ.

ನಾಮಪತ್ರ ಪರಿಶೀಲನೆಯ ನಂತರ 26 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದು, ಮಾರ್ಚ್ 29ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News