×
Ad

ಎಸ್.ಐ.ಒ: ವಿದ್ಯಾರ್ಥಿ ಪ್ರಣಾಳಿಕೆ ಬಿಡುಗಡೆ

Update: 2019-03-27 23:06 IST

ಭಟ್ಕಳ: ಇಲ್ಲಿನ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಆಫ್ ಇಂಡಿಯಾ ಭಟ್ಕಳ ಶಾಖೆಯು ಲೋಕಸಭೆ ಚುನಾವಣೆ ನಿಮಿತ್ತ ವಿದ್ಯಾರ್ಥಿ ಪ್ರಣಾಳಿಕೆ ಯನ್ನು ಬಿಡುಗೊಳಿಸಿತು.

ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿದ ಎಸ್.ಐ.ಒ ರಾಜ್ಯ ಸಂಘಟನಾ ಕಾರ್ಯದರ್ಶಿ ಫಹಿಮುದ್ದೀನ್ ಬೀದರ, ರಾಷ್ಟ್ರಾದ್ಯಂತ ಇಂದು ವಿದ್ಯಾರ್ಥಿ ಸಮುದಾಯ ಮತ್ತು ಯುವಕರು ಹತ್ತಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಸರ್ಕಾರ ಅಥವಾ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿ ಸಮುದಾಯದ ಸಮಸ್ಯೆ ಗಳನ್ನು ಬಗೆಹರಿಸಲು ಪ್ರಯತ್ನಿಸುತ್ತಿಲ್ಲ. ಈ ಕಾರಣಕ್ಕಾಗಿ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಆಫ್ ಇಂಡಿಯಾ ಕರ್ನಾಟಕವು ಚುನಾವಣಾ ವಿದ್ಯಾರ್ಥಿ ಪ್ರಣಾಳಿಕೆಯನ್ನು ತರುತ್ತಿದ್ದು ಎಂದಿನಂತೆ ಧರ್ಮ, ಜಾತಿ ಆಧಾರದಲ್ಲಿ ದೇಶದ ಭವಿಷ್ಯದ ಬಗ್ಗೆ ತೀರ್ಮಾನ ಮಾಡದೆ ಸಮಾಜದ ನೈಜ್ಯ ವಿಚಾರ ಗಳಾದ ಶಿಕ್ಷಣ, ಉದ್ಯೋಗ, ಮತ್ತು ವಿದ್ಯಾರ್ಥಿ ಸಮಸ್ಯೆಗಳ ಬಗ್ಗೆ ಸಮಾಜದಲ್ಲಿ ಚರ್ಚೆಗಳು ನಡೆದು ಆ ಮೂಲಕ ರಾಜಕೀಯ ಪಕ್ಷಗಳು ವಿದ್ಯಾರ್ಥಿ ಯುವ ಜನರ ಸಮಸ್ಯೆಗಳ ಸಮಗ್ರ ಪರಿಹಾರಕ್ಕಾಗಿ ಕಾರ್ಯಪ್ರವೃತ್ತರಾಗಬೇಕಾಗಿದೆ ಎಂದರು.

ಶಿಕ್ಷಣ, ಉದ್ಯೋಗ, ಸಮಾಜಿಕ, ಮಾನವಹಕ್ಕು ಪರಿಸರ ಕುರಿತಂತೆ ಹಲವು ಕಾರ್ಯಕ್ರಮಗಳನ್ನು ಎಸ್.ಐ.ಓ ತನ್ನ ವಿದ್ಯಾರ್ಥಿ ಪ್ರಣಾಳಿಕೆಯಲ್ಲಿ ಸೇರಿಸಿದ್ದು ರಾಜಕೀಯ ಪಕ್ಷಗಳು ಇವುಗಳನ್ನು ತಮ್ಮ ಪ್ರಣಾಳಿಕೆಯಲ್ಲಿ ಸೇರಿಸಿಕೊಳ್ಳುವುದರ ಮೂಲಕ ಜಾರಿಗೊಳಿಸಲು ಪ್ರಯತ್ನಿಸಬೇಕು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಎಸ್.ಐ.ಒ ಜಿಲ್ಲಾಧ್ಯಕ್ಷ ಅಬುದ್ ಆಸಿಫ್ ರುಕ್ನುದ್ದೀನ್, ಭಟ್ಕಳ ಶಾಖೆಯ ಅಧ್ಯಕ್ಷ ಸನಾವುಲ್ಲಾ ಅಸಾದಿ, ಕಾರ್ಯದರ್ಶಿ ಶುಯೇಬ್ ಎಸ್.ಎಂ ಹಾಗೂ ಜಮಾಅತೆ ಇಸ್ಲಾಮಿ ಭಟ್ಕಳ ಶಾಖೆಯ ಅಧ್ಯಕ್ಷ ಮುಜಾಹಿದ್ ಮುಸ್ತಫಾ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News