ಐಟಿ ದಾಳಿ ರಾಜಕೀಯ ಪ್ರೇರಿತ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

Update: 2019-03-28 13:17 GMT

ಬೆಂಗಳೂರು, ಮಾ. 28: ಸಚಿವ ಸಿ.ಎಸ್.ಪುಟ್ಟರಾಜು ಸೇರಿದಂತೆ ಹಲವರ ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿರುವುದು ರಾಜಕೀಯ ಪ್ರೇರಿತ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ಆರೋಪಿಸಿದ್ದಾರೆ.

ಗುರುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಕುಮಾರಸ್ವಾಮಿ ಆಪ್ತರ ಮನೆಗಳ ಮೇಲೆ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ನೀಡಿದ ಮಾಹಿತಿಯಂತೆ ದಾಳಿ ನಡೆದಿದೆ ಎಂದು ಹೇಳಿದರು.

ವಿಧಾನಸಭಾ ಚುನಾವಣೆ ಸಂದರ್ಭದಲ್ಲೂ ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ದಾಳಿ ನಡೆಸಿದ್ದರು. ಇದೀಗ ಲೋಕಸಭಾ ಚುನಾವಣೆ ವೇಳೆ ದಾಳಿ ಅಸ್ತ್ರ ಪ್ರಯೋಗಿಸುತ್ತಿದ್ದಾರೆ. ಆದಾಯ ತೆರಿಗೆ ಇಲಾಖೆ ಅವರು ದಾಳಿ ಮಾಡುವ ಸ್ವಾತಂತ್ರ್ಯವಿದೆ. ಆದರೆ, ಬಿಜೆಪಿ ನಾಯಕರ ಮನೆ ಮೇಲೆ ಯಾಕೆ ದಾಳಿಯಾಗುವುದಿಲ್ಲ ಎಂದು ಪ್ರಶ್ನಿಸಿದರು.

ಕೇಂದ್ರ ಸರಕಾರ ಐಟಿಯನ್ನು ತಮ್ಮ ಅನುಕೂಲಕ್ಕೆ ಬಳಸಿಕೊಳ್ಳುತ್ತಿರುವ ಬಗ್ಗೆ ಜನರ ಗಮನಕ್ಕೆ ತರಲಾಗುತ್ತದೆ. ಕೇಂದ್ರ ಸರಕಾರ ಎಷ್ಟೇ ದಾಳಿ ಅಸ್ತ್ರ ಬಿಟ್ಟರು ಅದಕ್ಕೆ ನಾವು ಭಯ ಪಡುವುದಿಲ್ಲ. ಜನರು ನಮ್ಮ ಜೊತೆ ಇದ್ದಾರೆ ಎಂದ ಅವರು, ದಾಳಿ ಇನ್ನಷ್ಟು ಹೆಚ್ಚಿದರೆ ತಕ್ಕ ಉತ್ತರ ನೀಡಲಾಗುವುದು ಎಂದು ಎಚ್ಚರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News