×
Ad

ಕೊಡಂಗೆ ಸರಕಾರಿ ಶಾಲೆಯಲ್ಲಿ ಸಂಚಾರಿ ನ್ಯಾಯಾಲಯದ ಕಾನೂನು ಮಾಹಿತಿ ಶಿಬಿರ

Update: 2019-03-28 18:26 IST

ಬಂಟ್ವಾಳ, ಮಾ. 28: ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾಪಂ ಮತ್ತು ಕಂದಾಯ ಇಲಾಖೆ ಹಾಗೂ ಇತರ ಸರಕಾರಿ ಇಲಾಖೆಗಳ ಸಹಯೋಗದೊಂದಿಗೆ ಕೊಡಂಗೆ ಸರಕಾರಿ ಶಾಲೆಯಲ್ಲಿ ಗುರುವಾರ ಕಾನೂನು ಸಾಕ್ಷರಥಾ ಮತ್ತು ಸಂಚಾರಿ ನ್ಯಾಯಾಲಯದ ಕಾನೂನು ಮಾಹಿತಿ ಶಿಬಿರ ನಡೆಯಿತು.

ಹಿರಿಯ ಸಿವಿಲ್ ನ್ಯಾಯಾಧೀಶ ನುಹಮ್ಮದ್ ಇಮ್ತಿಯಾಝ್ ಅಹ್ಮದ್ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು. ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ವಕೀಲ ಶಿವಪ್ರಕಾಶ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸಂವಿಧಾನದ ಮೂಲಭೂತ ಕರ್ತವ್ಯಗಳ ಬಗ್ಗೆ ಮಾಹಿತಿ ನೀಡಿದರು. 

ವೇದಿಕೆಯಲ್ಲಿ ತಾಪಂ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ನೋಣಯ್ಯ ನಾಯ್ಕ್ ಎನ್., ಮುಖ್ಯೋಪಾಧ್ಯಾಯ ಭಾಸ್ಕರ್ ರಾವ್, ವಕೀಲರಾದ ಎ.ಕೆ.ರಾವ್, ಆಶಾಮಣಿ, ರಾಜೇಶ್ ಬೊಳ್ಳುಕಲ್ಲು, ಸತೀಶ್ ಬಿ. ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News