×
Ad

ಮಂಗಳೂರು: ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಪೊರೇಟರ್‌ಗಳ ಸಭೆ

Update: 2019-03-28 20:41 IST

ಮಂಗಳೂರು, ಮಾ.28: ಮಂಗಳೂರು ಮಹಾನಗರ ಪಾಲಿಕೆಯ ಕಾಂಗ್ರೆಸ್ ಕಾರ್ಪೊರೇಟರ್‌ಗಳ ಸಭೆಯು ದ.ಕ.ಜಿಲ್ಲಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಸಮನ್ವಯ ಸಮಿತಿಯ ಅಧ್ಯಕ್ಷ ಬಿ.ರಮಾನಾಥ ರೈ ಹಾಗೂ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್‌ರ ನೈತೃತ್ವದಲ್ಲಿ ಗುರುವಾರ ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜರುಗಿತು.

ಕ್ಷೇತ್ರದ ಮೈತ್ರಿಕೂಟದ ಅಭ್ಯರ್ಥಿಯ ಗೆಲುವಿಗೆ ಎಲ್ಲಾ ಕಾಪೋರೇಟರ್‌ಗಳು ಶಕ್ತಿ ಮೀರಿ ಕೆಲಸ ಮಾಡಬೇಕು ಎಂದು ನಾಯಕರು ಸೂಚಿಸಿದರು.
ಸಭೆಯಲ್ಲಿ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ, ಮಾಜಿ ಶಾಸಕರಾದ ಮೊಯ್ದಿನ್ ಬಾವ, ಜೆ.ಆರ್. ಲೋಬೋ, ಕಣಚೂರು ಮೋನು, ಶಶಿಧರ್ ಹೆಗ್ಡೆ, ಸದಾಶಿವ ಶೆಟ್ಟಿ, ಜೆ.ಅಬ್ದುಲ್ ಸಲೀಂ, ವಿಶ್ವಾಸ್ ಕುಮಾರ್ ದಾಸ್ ಉಪಸ್ಥಿತರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News