×
Ad

ಆರೋಗ್ಯ ಇಲಾಖೆಯಲ್ಲಿ ಮತದಾನ ಪ್ರತಿಜ್ಞಾ ವಿಧಿ ಸ್ವೀಕಾರ

Update: 2019-03-28 21:07 IST

ಉಡುಪಿ, ಮಾ. 28: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಭಾಂಗಣದಲ್ಲಿ ಗುರುವಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಓಂ ಪ್ರಕಾಶ್ ಕಟ್ಟಿಮನಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಕುಷ್ಠರೋಗ ಕಾರ್ಯಕ್ರಮದ ಬಗ್ಗೆ ಜಿಲ್ಲೆಯ ಕಿರಿಯ ಪುರುಷ ಮತ್ತು ಮಹಿಳಾ ಆರೋಗ್ಯ ಸಿಬ್ಬಂದಿಗಳಿಗೆ ನಡೆದ ತರಬೇತಿ ಕಾರ್ಯಾಗಾರದಲ್ಲಿ ಮತದಾನ ಪ್ರತಿಜ್ಞಾ ವಿಧಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರ್‌ಸಿಎಚ್ ಅಧಿಕಾರಿ, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News