×
Ad

ತೆಂಕನಿಡಿಯೂರು ಕಾಲೇಜು: ಉದ್ಯೋಗ ಮಾಹಿತಿ

Update: 2019-03-28 21:19 IST

ಉಡುಪಿ, ಮಾ.28: ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತತಿರ ಅಧ್ಯಯನ ಕೇಂದ್ರದ ಉದ್ಯೋಗ ಮಾಹಿತಿ ಘಟಕ, ಐಕ್ಯೂಎಸಿ ವತಿಯಿಂದ ವ್ಯಕ್ತಿತ್ವ ವಿಕಸನ ಮತ್ತು ಸಂದರ್ಶನ ಎದುರಿಸುವ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಹರ್ಷಿತ್ ಗೌಡ ಇವರು ಸಂದರ್ಶನ ಎದುರಿಸುವ ಬಗ್ಗೆ ಪಿಪಿಟಿ ಮೂಲಕ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಪರಸ್ಪರ ಚರ್ಚೆ, ಪ್ರಾತ್ಯಕ್ಷಿಕೆ ಮೂಲಕ ಸಂದರ್ಶನ ಎದುರಿಸಲು ಅ್ಯರ್ಥಿ ಹೇಗೆ ತಯಾರಾಗಬೇಕೆಂದು ಮಾರ್ಗದರ್ಶನ ಮಾಡಿದರು.

ಪದವಿ ವಿಭಾಗ ಮತ್ತು ಸ್ನಾತಕೋತ್ತರ ಪದವಿ ವಿಭಾಗಗಳಿಗೆ ಪ್ರತ್ಯೇಕ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸುಮಾರು 400ಕ್ಕೂ ಅಧಿಕ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಎಸ್. ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.

ಐಕ್ಯೂಎಸಿ ಸಂಚಾಲಕ ಡಾ. ಸುರೇಶ ರೈ ಕೆ., ಅರ್ಥಶಾಸ್ತ್ರ ವಿಬಾಗದ ಮುಖ್ಯಸ್ಥ ಡಾ. ಗೋಪಾಲಕೃಷ್ಣ ಎಂ. ಗಾಂವ್ಕರ್, ವಾಣಿಜ್ಯ ಶಾಸ್ತ್ರ ವಿಬಾಗದ ಮುಖ್ಯಸ್ಥ ಪ್ರೊ.ತಿಮ್ಮಣ್ಣ ಜಿ. ಭಟ್ ಉಪಸ್ಥಿತರಿದ್ದರು.

ಉದ್ಯೋಗ ಮಾಹಿತಿ ಘಟಕದ ಪದವಿ ವಿಬಾಗದ ಸಂಚಾಲಕ ಪ್ರೊ. ಉಮೇಶ ಪೈ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಉದ್ಯೋಗ ಮಾಹಿತಿ ಘಟಕದ ಸ್ನಾತಕೋತ್ತರ ವಿಭಾಗದ ಸಂಚಾಲಕ ಡಾ. ಎಚ್.ಕೆ. ವೆಂಕಟೇಶ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News