×
Ad

ಕೆಎಸ್‌ಆರ್‌ಟಿಸಿ ಬಸ್-ಬೈಕ್ ಡಿಕ್ಕಿ: ಲೈನ್‌ಮೆನ್ ಮೃತ್ಯು

Update: 2019-03-28 22:30 IST

ಉಡುಪಿ, ಮಾ.28: ಕೆಎಸ್‌ಆರ್‌ಟಿಸಿ ಬಸ್ಸೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೆಸ್ಕಾಂ ಲೈನ್‌ಮೆನ್ ಮೃತಪಟ್ಟ ಘಟನೆ ಮಾ.27 ರಂದು ರಾತ್ರಿ 10ಗಂಟೆ ಸುಮಾರಿಗೆ ಕುಂಜಿಬೆಟ್ಟುವಿನ ರಾಮನಾಥ ಬಿಲ್ಡಂಗ್ ಬಳಿ ರಾಷ್ಟ್ರೀಯ ಹೆದ್ದಾರಿ 169(ಎ)ರಲ್ಲಿ ನಡೆದಿದೆ.

ಮೃತರನ್ನು ಬೆಳಗಾವಿ ಮೂಲದ ಕೆಂಪಣ್ಣ ಎಸ್.ಪಾಟೀಲ್(28) ಎಂದು ಗುರುತಿಸಲಾಗಿದೆ. ಕುಂಜಿಬೆಟ್ಟುವಿನಲ್ಲಿರುವ ಮೆಸ್ಕಾಂ ವಸತಿ ಗೃಹದಲ್ಲಿ ವಾಸ ವಾಗಿರುವ ಇವರು ಮಣಿಪಾಲ ಮೆಸ್ಕಾಂನಲ್ಲಿ ಲೈನ್‌ಮೆನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಮಣಿಪಾಲ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಎದುರಿನಲ್ಲಿ ಬರುತ್ತಿದ್ದ ಬೈಕ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಬೈಕ್ ಸಮೇತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಕೆಂಪಣ್ಣ ಪಾಟೀಲ್ ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತ ಪಟ್ಟರು. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News