ಐಟಿ ದಾಳಿ: ಕಾಂಗ್ರೆಸ್-ಜೆಡಿಎಸ್ ಪ್ರತಿಭಟನೆ

Update: 2019-03-28 18:26 GMT

ಬಿಜೆಪಿಯ ರಾಜಕೀಯ ಷಡ್ಯಂತ್ರದ ಭಾಗವಾಗಿ ರಾಜ್ಯದಲ್ಲಿ ಜೆಡಿಎಸ್- ಕಾಂಗ್ರೆಸ್ ಸಚಿವರು, ಶಾಸಕರು ಹಾಗೂ ಆಪ್ತರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಖಂಡಿಸಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಐಟಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಹಿರಿಯ ನಾಯಕರಾದ ಡಾ. ಜಿ.ಪರಮೇಶ್ವರ್, ರಾಮಲಿಂಗಾರೆಡ್ಡಿ, ಡಿ.ಕೆ.ಶಿವಕುಮಾರ್, ದಿನೇಶ್ ಗುಂಡೂರಾವ್, ಡಿ.ಸಿ.ತಮ್ಮಣ್ಣ, ಪುಟ್ಟರಾಜು, ಸಾ.ರಾ.ಮಹೇಶ್, ಎಸ್.ಟಿ.ಸೋಮ ಶೇಖರ್, ಶರವಣ, ನಾರಾಯಣಸ್ವಾಮಿ ಸೇರಿದಂತೆ ಸಾವಿರಾರು ಕಾರ್ಯಕರ್ತರು ಐಟಿ ಕಚೇರಿ ಮುಂಭಾಗ ಧರಣಿ ನಡೆಸಿ ಕೇಂದ್ರ ಸರಕಾರದ ವಿರುದ್ದ ಆಕ್ರೊಶ ವ್ಯಕ್ತಪಡಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor