ಮುದ್ದಹನುಮೇಗೌಡ ಮನವೊಲಿಸಲು ಕಾಂಗ್ರೆಸ್ ನಾಯಕರ ಕೊನೆಯ ಪ್ರಯತ್ನ
ಬೆಂಗಳೂರು, ಮಾ.29: ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅತೃಪ್ತಗೊಂಡಿರುವ ತುಮಕೂರಿನ ಸಂಸದ ಮುದ್ದಹನುಮೇಗೌಡ ಅವರ ಮನವೊಲಿಸುವ ಕೊನೆಯ ಪ್ರಯತ್ನ ಕಾಂಗ್ರೆಸ್ ಮುಂದುವರಿದಿದೆ.
ಸಂಜಯನಗರದಲ್ಲಿರುವ ಮುದ್ದಹನುಮೇಗೌಡ ಮನೆಗೆ ಶುಕ್ರವಾರ ಬೆಳಗ್ಗೆ ಉಪಮುಖ್ಯ ಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ದಿನೇಶ್ ಗುಂಡೂರಾವ್ ಆಗಮಿಸಿ ಮಾತುಕತೆ ಆರಂಭಿಸಿದ್ದಾರೆ.
ಸಂಸದ ಮುದ್ದೇಹನುಮಗೌಡ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಕಾರಣಕ್ಕಾಗಿ ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಅವರ ನಾಮಪತ್ರವನ್ನು ಹಿಂಪಡೆಯುವಂತೆ ಕಾಂಗ್ರೆಸ್ ನಾಯಕರು ಒತ್ತಡ ಹಾಕುತ್ತಿದ್ದಾರೆ.
ನಿನ್ನೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತುಕತೆ ನಡೆಸಿದ್ದರೂ ಫಲಕಾರಿಯಾಗಿಲ್ಲ. ಮುದ್ದಹನುಮೇಗೌಡ ನಾಮಪತ್ರವನ್ನು ಹಿಂಪಡೆಯಲು ಹಿಂದೇಟು ಹಾಕಿದ್ದಾರೆ. ನೂರಾರು ಮಂದಿ ಅಭಿಮಾನಿಗಳು ಅವರ ನಿವಾಸದ ಬಳಿ ಜಮಾಯಿಸಿದ್ದಾರೆ.
ತುಮಕೂರು ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಕಣಕ್ಕಿಳಿದಿದ್ದಾರೆ. ಯಾವುದೇ ಕಾರಣಕ್ಕೂ ನಾಮಪತ್ರ ವಾಪಸ್ ಪಡೆಯಲ್ಲ ಎಂದು ಮುದ್ದಹನುಮೇಗೌಡರು ಪಟ್ಟು ಹಿಡಿದಿದ್ದಾರೆ.