ಕಾಶ್ಮೀರದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ
Update: 2019-03-29 12:15 IST
ಶ್ರೀನಗರ, ಎ.29: ಕಾಶ್ಮೀರದ ಬಡ್ಗಾಂ ಜಿಲ್ಲೆಯ ಸೋವ್ ಗಾಂನಲ್ಲಿ ಶುಕ್ರವಾರ ಬೆಳಗ್ಗೆ ಭದ್ರತಾ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಜೈಶ್ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಯೋಧರು ಗಾಯಗೊಂಡಿದ್ದಾರೆ.