ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿ ಬಿದ್ದ ಗುಜರಾತ್ ಬಿಜೆಪಿ ಅಧ್ಯಕ್ಷನ ಪುತ್ರ
Update: 2019-03-29 15:18 IST
ರಾಜ್ ಕೋಟ್, ಮಾ.29: ಗುಜರಾತ್ ನ ಬಿಜೆಪಿ ಅಧ್ಯಕ್ಷ ಜಿತು ವಘಾನಿ ಪುತ್ರ ಗುರುವಾರ ಭಾನ್ ನಗರದಲ್ಲಿ ಕಾಲೇಜು ಪರೀಕ್ಷೆಯಲ್ಲಿ ನಕಲು ಮಾಡಲು ಹೋಗಿ ಸಿಕ್ಕಿ ಬಿದ್ದಿದ್ದಾನೆ.
ಭಾವ್ ನಗರ್ ವಿಶ್ವವಿದ್ಯಾನಿಲಯಕ್ಕೆ ಸೇರಿರುವ ಮೂರು ಕಾಲೇಜುಗಳ ರಿಪೀಟರ್ ವಿದ್ಯಾರ್ಥಿಗಳಿಗಾಗಿ ಪರೀಕ್ಷೆ ಎಂ,ಜೆ. ವಾಣಿಜ್ಯ ಕಾಲೇಜಿನಲ್ಲಿ ನಡೆಯುತ್ತಿದ್ದು, ಗುಜರಾತ್ ನ ಬಿಜೆಪಿ ಅಧ್ಯಕ್ಷ ಜಿತು ವಘಾನಿ ಪುತ್ರ ಪ್ರಥಮ ವರ್ಷದ ಬಿಸಿಎ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಜಾಗೃತ ದಳದ ಕೈಗೆ ಸಿಕ್ಕಿಬಿದ್ದಿದ್ದಾನೆ.
ಮಗನನ್ನು ರಕ್ಷಿಸಲು ಯಾವುದೇ ಪ್ರಯತ್ನ ಮಾಡುವುದಿಲ್ಲ. ತಪ್ಪು ಮಾಡಿದರೆ ಅವನಿಗೆ ವಿವಿ ನಿಯಮ ಪ್ರಕಾರ ಶಿಕ್ಷೆಯಾಗಲಿ ಮತ್ತು ಎರಡು ವರ್ಷಗಳ ಕಾಲ ಪರೀಕ್ಷೆ ಬರೆಯದಂತೆ ಕಪ್ಪುಪಟ್ಟಿಗೆ ಸೇರಿಸಬೇಕೆಂದು ಹೇಳಿದ್ದಾರೆ.