×
Ad

ಮಕ್ಕಳಿಗೆ ವಿಷ ಉಣಿಸಿ ತಾಯಿ ಆತ್ಮಹತ್ಯೆ

Update: 2019-03-30 20:06 IST

ಬೆಂಗಳೂರು, ಮಾ.30: ಮಾನಸಿಕ ಖಿನ್ನತೆಗೆ ಒಳಗಾದ ತಾಯಿಯೊಬ್ಬಳು ಮಕ್ಕಳಿಗೆ ವಿಷ ಉಣಿಸಿ ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಇಲ್ಲಿನ ರಾಮಮೂರ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಹೊರಮಾವುನಲ್ಲಿ ಈ ಘಟನೆ ನಡೆದಿದ್ದು, ತಾಯಿ ಮೀನಾ(23), ಮಗು ಸುಗುಣಾ(3) ಮೃತಪಟ್ಟವರು ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಮೀನಾ ಅವರ 6 ವರ್ಷದ ಮಗ ಚರಣ್ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ರಾಮಮೂರ್ತಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News