×
Ad

ಮಾ.31: ಚೌಕೀದಾರ್-ಸಂವಾದ

Update: 2019-03-30 22:21 IST

ಉಡುಪಿ, ಮಾ.30: ‘ಮೈ ಭೀ ಚೌಕೀದಾರ್’ ಪರಿಕಲ್ಪನೆಯಡಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೊಸದಿಲ್ಲಿಯಲ್ಲಿ ನೇರವಾಗಿ ನಡೆಸಿ ಕೊಡುವ ರಾಷ್ಟ್ರೀಯ ಮಟ್ಟದ ಸಂವಾದ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಜನತೆ ಕೂಡಾ ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಉಡುಪಿ ಜಿಲ್ಲಾ ಬಿಜೆಪಿ ವಿನಂತಿಸಿದೆ.

ಈ ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಜಿಲ್ಲಾ ಬಿಜೆಪಿ ಅವಕಾಶ ಕಲ್ಪಿಸಿದ್ದು, ಉಡುಪಿ ಅಜ್ಜರಕಾಡಿನ ಭುಜಂಗ ಪಾರ್ಕ್ ಪರಿಸರದಲ್ಲಿ ಮಾ.31ರ ರವಿವಾರ ಸಂಜೆ 4:00 ಗಂಟೆಗೆ ಪ್ರಧಾನಿ ಮೋದಿ ಅವರೊಂದಿಗೆ ಸಂವಾದ ನಡೆಸಬಹುದಾಗಿದೆ. ಇದಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭುಜಂಗ ಪಾರ್ಕ್‌ನಲ್ಲಿ ಉಪಸ್ಥಿತರಿರಬೇಕೆಂದು ಉಡುಪಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಕುಯಿಲಾಡಿ ಸುರೇಶ್ ನಾಯಕ್ ವಿನಂತಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News