×
Ad

ನಿವೃತ್ತಿಯಿಂದ ತೆರವಾದ ಸ್ಥಾನಕ್ಕೆ ನೇಮಕ

Update: 2019-03-30 22:38 IST

ಬೆಂಗಳೂರು, ಮಾ. 30: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರನ್ನು ಎಂ.ಕೆ.ಅಯ್ಯಪ್ಪ ಅವರ ಸ್ವಯಂ ನಿವೃತ್ತಿಯಿಂದ ತೆರವಾಗಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್(ಪಂಚಾಯತ್ ರಾಜ್) ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ (ಪ್ರಭಾರ) ನಿಯೋಜನೆ ಮಾಡಲಾಗಿದೆ.

ಅದೇ ರೀತಿ ವಸತಿ ಇಲಾಖೆ ಕಾರ್ಯದರ್ಶಿ ಡಾ.ಜೆ.ರವಿಶಂಕರ್ ಅವರನ್ನು ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಕಾರ್ಯದರ್ಶಿ, ಕರ್ನಾಟಕ ರೇಶ್ಮೆ ಉದ್ಯಮಗಳ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕಿ ನೀಲಾ ಮಂಜುನಾಥ್ ಅವರಿಗೆ ರೇಶ್ಮೆ ಅಭಿವೃದ್ಧಿ ಮತ್ತು ರೇಶ್ಮೆ ನಿರ್ದೇಶಕಿ ಹಾಗೂ ಆಹಾರ ಇಲಾಖೆ ಆಯುಕ್ತ ಟಿ.ಎಚ್.ಎಂ.ಕುಮಾರ್ ಅವರನ್ನು ಆಹಾರ ಇಲಾಖೆ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಪ್ರಭಾರದಲ್ಲಿ ನೇಮಿಸಿ ಆದೇಶಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News