×
Ad

ಮಂಗಳೂರು: ಕಾಂಗ್ರೆಸ್ ಚುನಾವಣಾ ಕಾರ್ಯಾಲಯ ಉದ್ಘಾಟನೆ

Update: 2019-03-31 12:20 IST

ಮಂಗಳೂರು, ಮಾ.31: ದ.ಕ.ಜಿಲ್ಲಾ ಕಾಂಗ್ರೆಸ್ ಚುನಾವಣಾ ಕಾರ್ಯಾಲಯವು ನಗರದ ಬೆಂದೂರ್‌ವೆಲ್ ಬಳಿ ರವಿವಾರ ಉದ್ಘಾಟನೆಗೊಂಡಿತು.

ಬೋಳಾರದ ಹಳೆಕೋಟೆ ಮುಖ್ಯಪ್ರಾಣ ದೇವಸ್ಥಾನದ ಪ್ರಧಾನ ಅರ್ಚಕ ಗುರುಪ್ರಸಾದ್, ಕಂಕನಾಡಿಯ ರಹ್ಮಾನಿಯಾ ಜುಮಾ ಮಸೀದಿಯ ಖತೀಬ್ ಅಬ್ದುರ್ರಹ್ಮಾನ್ ಸಅದಿ, ರೋಝಾರಿಯಾ ಕೆಥಡ್ರಾಲ್ ಚರ್ಚ್‌ನ ಪ್ರಧಾನ ಧರ್ಮಗುರು ಫಾ. ಜೆ.ಬಿ.ಕ್ರಾಸ್ತಾ ಜಂಟಿಯಾಗಿ ಕಾರ್ಯಾಲಯ ಉದ್ಘಾಟಿಸಿ ಪಕ್ಷದ ಅಭ್ಯರ್ಥಿಗೆ ಆಶೀರ್ವದಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕಾಂಗ್ರೆಸ್-ಜೆಡಿಎಸ್ ಜಂಟಿ ಚುನಾವಣಾ ಸಮಿತಿಯ ಅಧ್ಯಕ್ಷ ರಮಾನಾಥ ರೈ, ಪಕ್ಷದ ಅಭ್ಯರ್ಥಿ ಮಿಥುನ್ ರೈ ಮಾತನಾಡಿದರು. ಕಾರ್ಯಕ್ರಮದಲ್ಲಿ ಮಾಜಿ ರಾಜ್ಯಸಭಾ ಸದಸ್ಯ ಬಿ.ಇಬ್ರಾಹೀಂ, ಮಾಜಿ ಶಾಸಕರಾದ ಜೆ.ಆರ್.ಲೋಬೊ, ಮೊಯ್ದಿನ್ ಬಾವಾ, ಕೆ.ಎಸ್.ಮುಹಮ್ಮದ್ ಮಸೂದ್, ಎನ್.ಎಂ.ಅಡ್ಯಂತಾಯ, ಪಕ್ಷದ ಮುಖಂಡರಾದ ಕಳ್ಳಿಗೆ ತಾರನಾಥ ಶೆಟ್ಟಿ, ಟಿ.ಎಂ.ಶಹೀದ್, ಸುರೇಶ್ ಬಲ್ಲಾಳ್, ಬಲರಾಜ ರೈ, ಎ.ಸಿ.ಭಂಡಾರಿ, ತೇಜೋಮಯ, ಜೆಡಿಎಸ್ ಮುಖಂಡ ಧನರಾಜ್ ಮತ್ತಿತರರು ಪಾಲ್ಗೊಂಡಿದ್ದರು.

ಕೆ.ಕೆ.ಶಾಹುಲ್ ಹಮೀದ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News