×
Ad

ಮತದಾನ ಜಾಗೃತಿಯ ಯಕ್ಷಗಾನ ಪ್ರದರ್ಶನಕ್ಕೆ ಚಾಲನೆ

Update: 2019-03-31 22:29 IST

ಉಡುಪಿ, ಮಾ. 31: ಉಡುಪಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜಿಲ್ಲೆ ಯಲ್ಲಿ ಮತದಾನ ಜಾಗೃತಿಗಾಗಿ ಸಿದ್ದಪಡಿಸಿರುವ ಯಕ್ಷಗಾನ ಕಾರ್ಯ ಕ್ರಮಕ್ಕೆ ಉಡುಪಿ ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಚಂಡೆ ಬಾರಿಸುವ ಮೂಲಕ ರವಿವಾರ ಮಲ್ಪೆಬೀಚ್‌ನಲ್ಲಿ ಚಾಲನೆ ನೀಡಿದರು.

ಸಮೃಧ್ದಿಪುರದ ಮಹಾರಾಜನ ಕಥಾ ಹಿನ್ನಲೆ ಹೊಂದಿರುವ ಈ ಯಕ್ಷಗಾನ ದಲ್ಲಿ, ಪುತ್ರ ಸಂತಾನವಿಲ್ಲದ ಮಹಾರಾಜ ಕೂಡ ತನ್ನ ಉತ್ತರಾಧಿಕಾರಿಯನ್ನು ಪ್ರಜಾಪ್ರಭುತ್ವ ಮಾದರಿಯಲ್ಲಿ ಅರ್ಹ ಅ್ಯರ್ಥಿಯನ್ನು ಮತದಾನದ ಮೂಲಕ ಆಯ್ಕೆ ಮಾಡುವ ಕಥೆ ಇದೆ. ಯಾವುದೇ ಆಮಿಷಗಳಿಗೆ ಒಳಗಾಗದೇ ಪ್ರತಿ ಯೊಬ್ಬರೂ ತಮ್ಮ ಆಯ್ಕೆಯ ಅ್ಯರ್ಥಿಯನ್ನು ಆಯ್ಕೆ ಮಾಡಬೇಕು ಎಂಬ ಮತದಾನದ ಸಂದೇಶವನ್ನು ಈ ಯಕ್ಷಗಾನದ ಮೂಲಕ ಸಾರಲಾಗುತ್ತಿದೆ.

ಕೋಟದ ಕಲಾಪೀಠ ತಂಡದ ಕಲಾವಿದರು ಈ ಯಕ್ಷಗಾನ ಪ್ರದರ್ಶನ ನೀಡುತ್ತಿದ್ದು, ಜಿಲ್ಲೆಯಲ್ಲಿ ಕಳೆದ ಚುನಾವಣೆಯಲ್ಲಿ ಅತೀ ಕಡಿಮೆ ಮತದಾನ ವಾಗಿರುವ ಪ್ರದೇಶಗಳನ್ನು ಗುರುತಿಸಿ ಅಲ್ಲಿ ಜನಜಾಗೃತಿ ಮೂಡಿಸುವ ಮೂಲಕ ಮತದಾನ ಹೆಚ್ಚಳಕ್ಕೆ ಜಿಲ್ಲಾ ಸ್ವೀಪ್ ಸಮಿತಿ ಕಾರ್ಯಕ್ರಮ ನಡೆಸುತ್ತಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕರಿ ಸಿಂಧೂ ಬಿ.ರೂಪೇಶ್, ಪೌರಾಯುಕ್ತ ಆನಂದ್ ಕಲ್ಲೋಳಿಕರ್, ಉಡುಪಿ ತಾಪಂ ಕಾರ್ಯನಿರ್ವಹಣಾಧಿಕಾರಿ ರಾಜು, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಭುಜಬಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಓಂಪ್ರಕಾಶ್ ಕಟ್ಟೀಮನಿ, ಬೈಂದೂರು ಕ್ಷೇತ್ರ ಶಿಕ್ಷಣಾಧಿ ಕಾರಿ ಅಶೋಕ್ ಕಾಮತ್ ಉಪಸ್ಥಿತರಿದ್ದರು.

ಉಡುಪಿ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಹರಿಕೃಷ್ಣ ಶಿವತ್ತಾಯ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News