ನೇಪಾಳದಲ್ಲಿ ಭಾರಿ ಮಳೆ; ಅಪಾರ ಸಾವು ನೋವು

Update: 2019-04-01 03:32 GMT

ಕಠ್ಮಂಡು, ಎ.1: ನೇಪಾಳದ ಹಲವು ಗ್ರಾಮಗಳಲ್ಲಿ ಮಳೆಯ ಅಬ್ಬರಕ್ಕೆ ಕನಿಷ್ಠ 25 ಮಂದಿ ಬಲಿಯಾಗಿದ್ದು, 400ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಬಾರಾ ಮತ್ತು ಪಾರ್ಸಾ ಜಿಲ್ಲೆಯ ಹಲವು ಗ್ರಾಮಗಳಲ್ಲಿ ರವಿವಾರ ಸಂಜೆ ಅನಿರೀಕ್ಷಿತವಾಗಿ ಭಾರಿ ಮಳೆ ಸುರಿದ ಕಾರಣ ಈ ದುರಂತ ಸಂಭವಿಸಿದೆ ಎಂದು ಗೃಹ ಸಚಿವಾಲಯದ ಅಧಿಕಾರಿಗಳು ಪ್ರಕಟಿಸಿದ್ದಾರೆ.

ಬಾರಾ ಜಿಲ್ಲೆಯಲ್ಲಿ 24 ಮಂದಿ ಮೃತರಾಗಿದ್ದು, ಪಾರ್ಸಾ ಜಿಲ್ಲೆಯಲ್ಲಿ ಒಬ್ಬರು ಜೀವ ಕಳೆದುಕೊಂಡಿದ್ದಾರೆ.

ವಿವಿಧ ಆಸ್ಪತ್ರೆಗಳಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ರಾಷ್ಟ್ರೀಯ ತುರ್ತು ಕಾರ್ಯಾಚರಣೆ ಕೇಂದ್ರ ಪ್ರಕಟಿಸಿದೆ. ಪ್ರಧಾನಿ ಕೆ.ಪಿ.ಶರ್ಮ ಓಲಿ ಅವರು ದುರಂತದ ಬಗ್ಗೆ ವಿಷಾದ ವ್ಯಕ್ತಪಿಸಿದ್ದು, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.

ತುರ್ತು ಕಾರ್ಯಾಚರಣೆ ಹಾಗೂ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಸೇನೆ ಮತ್ತು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News