×
Ad

ಫಲಿತಾಂಶ ಈಗಾಗಲೇ ನಿರ್ಧಾರವಾಗಿದೆ, ನನ್ನ ಗೆಲುವು ನಿಶ್ಚಿತ: ತೇಜಸ್ವಿ ಸೂರ್ಯ

Update: 2019-04-01 20:00 IST

ಬೆಂಗಳೂರು, ಎ. 1: ‘ಯಾರು ಬೆಂಬಲ ನೀಡಲಿ ಅಥವಾ ಬಿಡಲಿ. ಲೋಕಸಭಾ ಚುನಾವಣೆಯಲ್ಲಿ ನನ್ನ ಗೆಲ್ಲುವುದು ನಿಶ್ಚಿತ. ಫಲಿತಾಂಶ ಈಗಾಗಲೇ ನಿರ್ಧಾರವಾಗಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಮಾತನಾಡಿರುವ ವಿಡಿಯೋ ಹರಿದಾಡುತ್ತಿದೆ.

ಮುಂದಿನ ದಿನಗಳಲ್ಲಿ ಯಾರು, ಎಲ್ಲಿಂದ ಬೆಂಬಲ ನೀಡುತ್ತಾರೆ, ಯಾರು ನೀಡುವುದಿಲ್ಲ ಎಂಬುದು ಮುಖ್ಯವಲ್ಲ. ಪ್ರಧಾನಿ ಮೋದಿಯವರ ಪರವಾಗಿಯೇ ಮತ ಚಲಾಯಿಸುವುದು ಎಂದು ಜನ ಈಗಾಗಲೇ ನಿರ್ಧರಿಸಿದ್ದಾರೆ. ಫಲಿತಾಂಶ ಈಗಾಗಲೇ ನಿರ್ಧಾರವಾಗಿದೆ ಎಂದು ಹೇಳಿದ್ದಾರೆ.

ಜನರಿಗೆ ಮತ ಚಲಾಯಿಸಲು ಅನುವು ಮಾಡಿಕೊಡಬೇಕಾಗಿರುವುದಷ್ಟೇ ನಾವೀಗ ಮಾಡಬೇಕಿರುವ ಕೆಲಸ. ದಿವಂಗತ ಅನಂತಕುಮಾರ್ ಅವರ ಪತ್ನಿ ತೇಜಸ್ವಿನಿ ಅವರಿಗೆ ಕೊನೆ ಕ್ಷಣದಲ್ಲಿ ಟಿಕೆಟ್ ತಪ್ಪಿಸಿ, ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡಿರುವ ಬಿಜೆಪಿ ಹೈಕಮಾಂಡ್ ವಿರುದ್ಧ ರಾಜ್ಯ ನಾಯಕರು ಈಗಾಗಲೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೊತೆಗೆ, ಚುನಾವಣಾ ಪ್ರಚಾರದಲ್ಲೂ ಸರಿಯಾಗಿ ಭಾಗವಹಿಸುತ್ತಿಲ್ಲ. ಪ್ರಚಾರದಲ್ಲಿ ಭಾಗವಹಿಸುವ ಬಗ್ಗೆ ತೇಜಸ್ವಿನಿ ಅವರೂ ಇನ್ನೂ ಏನೂ ಹೇಳಿಲ್ಲ.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ರವಿವಾರ ಪ್ರಚಾರ ನಡೆಸಿದ್ದ ಬೊಮ್ಮನಹಳ್ಳಿಯ ಶಾಸಕ ಸತೀಶ್ ರೆಡ್ಡಿ ಅಭ್ಯರ್ಥಿಯ ಹೆಸರು ಹೇಳದೆಯೇ ಮತ ಯಾಚಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News