×
Ad

ಎ.6ರಂದು ಶಿರ್ವದಲ್ಲಿ ಯುಗಾದಿ ಉತ್ಸವ

Update: 2019-04-01 20:35 IST

ಶಿರ್ವ, ಎ.1: ಶಿರ್ವ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ, ಶಿರ್ವ ಮಹಿಳಾ ಮಂಡಲದ ವತಿಯಿಂದ ಧಾರ್ಮಿಕ ದಿನಾಚರಣೆಯ ಅಂಗವಾಗಿ ಯುಗಾದಿ ಉತ್ಸವ ಹಾಗೂ ಬೇವು ಬೆಲ್ಲ ವಿತರಣಾ ಕಾರ್ಯಕ್ರಮವು ಎ.6 ರಂದು ಸಂಜೆ 4ಗಂಟೆಗೆ ಶಿರ್ವ ಮಹಿಳಾ ಮಂಡಲದ ಕುತ್ಯಾರು ಕನ್ಯಾನ ಪ್ರೇಮಾ ಆರ್.ಶೆಟ್ಟಿ ವೇದಿಕೆಯಲ್ಲಿ ಜರಗಲಿದೆ.

ಅಧ್ಯಕ್ಷತೆಯನ್ನು ಗಣೇಶೋತ್ಸವ ಸಮಿತಿ ಅಧ್ಯಕ್ಷ ಶ್ರೀಪತಿ ಕಾಮತ್ ವಹಿಸ ಲಿರುವರು. ಸೂಡ ಸರಕಾರಿ ಪ್ರೌಢಶಾಲಾ ಶಿಕ್ಷಕ ರಮೇಶ ಶಾಸ್ತ್ರಿ ಯುಗಾದಿ ಸಂದೇಶ ನೀಡಲಿರುವರು.

ನಂತರ ಶಿರ್ವ ಹಿಂದೂ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ಹಾಗೂ ಪಿರಮಿಡ್ ಸಾಂಸ್ಕೃತಿಕ ವೈವಿಧ್ಯ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News