×
Ad

ಬೆಳಗಾವಿ ಜಿಲ್ಲಾಧಿಕಾರಿ ಉಜ್ವಲ್ ಕುಮಾರ್ ಘೋಷ್‌ ವರ್ಗಾವಣೆ

Update: 2019-04-01 21:34 IST

ಬೆಂಗಳೂರು, ಎ.1: ಭಾರತೀಯ ಚುನಾವಣಾ ಆಯೋಗದ ಸೂಚನೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಉಜ್ವಲ್ ಕುಮಾರ್ ಘೋಷ್‌ರನ್ನು ರಾಜ್ಯ ಸರಕಾರ ಸೋಮವಾರ ವರ್ಗಾವಣೆ ಮಾಡಿದೆ.

ಗ್ರಾಮೀಣ ಕುಡಿಯುವ ನೀರು ಹಾಗೂ ಒಳಚರಂಡಿ ಏಜೆನ್ಸಿಯ ಆಯುಕ್ತರಾಗಿದ್ದ ಡಾ.ಆರ್.ವಿಶಾಲ್‌ರನ್ನು ಬೆಳಗಾವಿ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಬಾಗಲಕೋಟೆ ಜಿಲ್ಲೆಯ ಕೃಷ್ಣಾ ಮೇಲ್ದಂಡೆ ಯೋಜನೆ ಭೂ ಸ್ವಾಧೀನ ಹಾಗೂ ಪುನರ್ವಸತಿ ವಿಭಾಗದ ಆಯುಕ್ತರಾಗಿದ್ದ ಉಜ್ವಲ್ ಕುಮಾರ್ ಘೋಷ್‌ರನ್ನು ಮಾ.30ರಂದು ಬೆಳಗಾವಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿತ್ತು. ಎರಡೇ ದಿನದಲ್ಲಿ ಅವರನ್ನು ಮತ್ತೆ ವರ್ಗಾವಣೆ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News