×
Ad

ಪ್ರಾಥಮಿಕ ಶಿಕ್ಷಕ ವೃಂದ ಹುದ್ದೆಗಳ ನೇರ ನೇಮಕಾತಿ

Update: 2019-04-01 21:49 IST

ಉಡುಪಿ, ಎ.1: 2018-19ನೇ ಸಾಲಿನಲ್ಲಿ ಪದವೀಧರ ಪ್ರಾಥಮಿಕ ಶಿಕ್ಷಕ (6ರಿಂದ 8ನೇ ತರಗತಿಗಳ) ವೃಂದ ಹುದ್ದೆಗಳನ್ನು ನೇರ ನೇಮಕಾತಿಯಿಂದ ಜಿಲ್ಲಾ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಇದಕ್ಕೆ ಸಂಬಂಧಿಸಿದಂತೆ, ಅರ್ಜಿ ಶುಲ್ಕವನ್ನು ಪಾವತಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಆನ್‌ಲೈನ್ ಮೂಲಕ ಅಂದರೆ ನೆಟ್ ಬ್ಯಾಂಕಿಂಗ್, ಕ್ರೆಡಿಟ್ ಕಾರ್ಡ್ ಅಥವಾ ಡೆಬಿಟ್ ಕಾರ್ಡ್ ಮೂಲಕ ಮಾತ್ರವೇ ಪಾವತಿಸ ಬೇಕು. ಇನ್ನಾವುದೇ ಸ್ವರೂಪದಲ್ಲಿ ಶುಲ್ಕ ಪಾವತಿಸುವಂತಿಲ್ಲ. ಈ ತಿದ್ದುಪಡಿ ಸೂಚನೆಯನ್ನು ಎಲ್ಲ ಅ್ಯರ್ಥಿಗಳು ಗಮನಿಸಿ ಅರ್ಜಿ ಸಲ್ಲಿಸುವಂತೆ ಆಯ್ಕೆ ಮತ್ತು ನೇಮಕಾತಿ ಪ್ರಾಧಿಕಾರಿಗಳಾದ ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News