ಗಣೇಶ್ ಜಾಮೀನು ಕೋರಿ ಅರ್ಜಿ ಸಲ್ಲಿಕೆ: ಬಿಡದಿ ಪೊಲೀಸ್ ಠಾಣೆಗೆ ಹೈಕೋರ್ಟ್ ನೋಟಿಸ್

Update: 2019-04-01 17:22 GMT

ಬೆಂಗಳೂರು, ಎ.1: ಆನಂದ್ ಸಿಂಗ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಾಸಕ ಜೆ.ಎನ್.ಗಣೇಶ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ಬಿಡದಿ ಪೊಲೀಸ್ ಠಾಣೆಗೆ ನೋಟಿಸ್ ಜಾರಿಗೊಳಿಸಿದೆ.

ಜಾಮೀನು ಕೋರಿ ಶಾಸಕ ಜೆ.ಎನ್.ಗಣೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅವರಿದ್ದ ನ್ಯಾಯಪೀಠದಲ್ಲಿ ನಡೆಯಿತು. ಗಣೇಶ್ ಪರ ವಾದಿಸಿದ ವಕೀಲ ಶ್ಯಾಮ್ ಸುಂದರ್ ಅವರು, ಸದ್ಯ ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಶಾಸಕ ಜೆ.ಎನ್.ಗಣೇಶ್ ಅವರು ಕ್ಷೇತ್ರದ ಜನರ ಜೊತೆಗೆ ಇರಲೇಬೇಕಾಗುತ್ತದೆ. ಹೀಗಾಗಿ, ಅವರಿಗೆ ಜಾಮೀನು ನೀಡಬೇಕೆಂದು ಪೀಠಕ್ಕೆ ಮನವಿ ಮಾಡಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಬಿಡದಿ ಪೊಲೀಸ್ ಠಾಣೆಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಎ.8ಕ್ಕೆ ಮುಂದೂಡಿತು.

ಪ್ರಕರಣವೇನು: ಈಗಲ್ ಟನ್ ರೆಸಾರ್ಟ್‌ನಲ್ಲಿ ಹೊಸಪೇಟೆ ಶಾಸಕ ಆನಂದ್‌ಸಿಂಗ್‌ಗೆ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಹಲ್ಲೆ ಮಾಡಿ ಬಳಿಕ ಕಾರಾಗೃಹ ಸೇರಿದ್ದಾರೆ. ಹಲ್ಲೆ ಬಳಿಕ ಆನಂದ್‌ಸಿಂಗ್ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News